ಬೆಂಗಳೂರು ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಬೆಂಗಳೂರು: ಜೂನ್ 4ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 18ನೇ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದ್ದೂ, 11 ಜನ ಸಾವನ್ನಪ್ಪಿದ್ದರು. ಇದರ ಬಳಿಕ ನಗರದ ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು.

ಇದೀಗ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ.

ಇದನ್ನೂ ಓದಿ: ಚಿನ್ನ ಕದ್ದ ಆರೋಪ: ವಿಚಾರಣೆ ವೇಳೆ ಕಸ್ಟಡಿಯಲ್ಲಿ ಸಾವನ್ನಪ್ಪಿದ ಯುವಕ

ನ್ಯಾ.ಬಿ ಕೆ ಶ್ರೀನಿವಾತ್ಸವ ಹಾಗು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿದೆ. ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯ ಒದಗಿಸಲು ಆದೇಶ ಹೊರಡಿಸಲಾಗಿದೆ.

ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇದೀಗ ಆದೇಶ ಹೊರಡಿಸಿದೆ.

ಇದನ್ನೂ ನೋಡಿ: ಭೂಸ್ವಾಧೀನ ವಿರೋಧಿಸಿ ಅನ್ನದಾತರಿಂದ ಅಹೋರಾತ್ರಿ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *