ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಬೆಂಗಳೂರು: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನರಾಗಿದ್ದಾರೆ.

ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿವೆ.

ಈ ವಿಷಯವಾಗಿ ಈಶ್ವರ ಬಿ ಖಂಡ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಂತಾದವರು ಸಂತಾಪ ಸೂಚಿಸಿದ್ದಾರೆ.

“ನಮ್ಮ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಸರಡಗಿ ಅವರು ಲೋಕಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪಾಲಿಕೆ ಸದಸ್ಯ ಸ್ಥಾನದಿಂದ ಲೋಕಸಭಾ ಸದಸ್ಯ ಸ್ಥಾನದವರೆಗೂ ಸುದೀರ್ಘ ರಾಜಕೀಯ ಪಯಣ ಮಾಡಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ನಷ್ಟ ಎಂದೇ ಭಾವಿಸುತ್ತೇನೆ. ಶಿಕ್ಷಣತಜ್ಞರು, ಪರೋಪಕಾರಿಯಾಗಿ ಗುರುತಿಸಿಕೊಂಡಿರುವ ಸರಡಗಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.

ಇದನ್ನು ಓದಿ : ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ! ಹೆಚ್.ಡಿ.ಕುಮಾರಸ್ವಾಮಿ 

ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ನಾಯಕರಾಗಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದ ಶ್ರೀ ಸರಡಗಿ ಅವರು, ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು, ಅವರ ಸಾವಿನ ಸುದ್ದಿ ತಿಳಿದು ದುಃಖವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಂತಾಪ ಸೂಚಿಸಿರುವ ಈಶ್ವರ ಖಂಡ್ರೆ, ಕಾನೂನು ಪದವೀಧರರಾಗಿದ್ದ ಶ್ರೀಯುತರು 1999 ಮತ್ತು 2004ರಲ್ಲಿ ಸಂಸತ್ ಸದಸ್ಯರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ನಾಡಿಗೆ ನೀಡಿರುವ ಕೊಡುಗೆ ಸ್ಮರಣಾರ್ಹವಾದದ್ದು.

ಈ ನೋವಿನ ಸಂದರ್ಭದಲ್ಲಿ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ಅವರ ಕುಟುಂಬದವರಿಗೆ, ಬಂಧು-ಮಿತ್ರರು ಮತ್ತು ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನು ನೋಡಿ : ದೇವೇಗೌಡ್ರೆ ಜನ ನಿಮಗೆ ಅಧಿಕಾರ ಕೊಟ್ರು – ನೀವು ವಿಕೃತಿ ಕಾಮಿಯನ್ನು ಕೊಟ್ರಿ. ನಿಮಗೆ ನಾವು ತಕ್ಕ ಪಾಠ ಕಲಿಸುತ್ತೇವೆ.

Donate Janashakthi Media

Leave a Reply

Your email address will not be published. Required fields are marked *