ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ,ತಪ್ಪಿತಸ್ಥರನ್ನು ಬಿಡುವುದಿಲ್ಲ; ಧರ್ಮೇಂದ್ರ ಪ್ರಧಾನ್

ಹೊಸದಿಲ್ಲಿ, : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ತಿಳಿಸಿದರು.

ಒಡಿಶಾದಿಂದ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್ ಅವರು, ಸರ್ವೋಚ್ಚ ನ್ಯಾಯಾಲಯದ ಶಿಫಾರಸುಗಳ ಮೇರೆಗೆ 1,563 ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಆದೇಶಿಸಲಾಗಿದೆ. ಎರಡು ಸ್ಥಳಗಳಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

ಇದನ್ನು ಓದಿ : ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯ ಹಿರಿಯ ಅಧಿಕಾರಿಗಳು ಸಹ ತಪ್ಪಿತಸ್ಥರೆಂದು ಕಂಡು ಬಂದರೂ ಅವರನ್ನು ಬಿಡುವುದಿಲ್ಲ ಎಂದ ಅವರು, ಸರಕಾರವು ಈ ಬಗ್ಗೆ ಕಳವಳಗೊಂಡಿದೆ. ಯಾವುದೇ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಎನ್‌ಟಿಎದಲ್ಲಿ ಬಹಳಷ್ಟು ಸುಧಾರಣೆಗಳ ಅಗತ್ಯವಿದೆ ಎಂದು ಪ್ರಧಾನ್ ಇದೇ ವೇಳೆ ಹೇಳಿದರು.

ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024

Donate Janashakthi Media

Leave a Reply

Your email address will not be published. Required fields are marked *