ಬೆಂಗಳೂರು: ಕಿಂಗ್ ಪಿನ್ ಆರ್. ಡಿ ಪಾಟೀಲ್ ಗೆ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧ, ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜುಲೈ 30ರಂದು ಸಿಜೆಐ ಬಿ ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದೆ. ಚಿಕಿತ್ಸೆಗಾಗಿ ದಯವಿಟ್ಟು ಕನಿಷ್ಟ 8 ವಾರ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಇದನ್ನೂ ಓದಿ: ಎಲ್ಲಿ ಅಕ್ರಮ, ಕ್ಷೇತ್ರದ ಹೆಸರು ಬಹಿರಂಗ ಪಡಿಸಿದ ಸಿಎಂ ಸಿದ್ದರಾಮಯ್ಯ
ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು.
ನಂತರ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದರು. 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಸೇರಿದಂತೆ ಕೆಇಎ ನಡೆಸಿದ ವಿವಿಧ ಪರೀಕ್ಷೆಗಳಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್. ಡಿ ಪಾಟೀಲ್ ಕೈವಾಡವಿತ್ತು.
ಇದನ್ನೂ ನೋಡಿ: ಧರ್ಮಸ್ಥಳದಲ್ಲಿನ ಕೊಲೆ ಅತ್ಯಾಚಾರಗಳ ಹಿಂದೆ ಇರುವವರು ಯಾರು? ಸತ್ಯ ಹೊರ ಬರಲಿ…
