5 ಹುಲಿಗಳ ಹತ್ಯೆ ಪ್ರಕರಣ: ಈಶ್ವರ ಖಂಡ್ರೆ ರಾಜೀನಾಮೆ ನೀಡಬೇಕು – ಹೊನ್ನೂರ್ ಪ್ರಕಾಶ್ ಆಗ್ರಹ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯ ಜೀವಿಧಾಮದ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಲ್ಲಿ ಐದು ಹುಲಿಗಳು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಜುಲೈ 26ರಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಆಗ್ರಹಿಸಿದ್ದಾರೆ.

ಶನಿವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶೀಸಿ ಹೊನ್ನೂರು ಪ್ರಕಾಶ್ ಮಾತನಾಡಿದರು.

ಇದನ್ನೂ ಓದಿ: ಮದ್ಯ ಸೇವಿಸಿ ಶಾಲೆಯಲ್ಲಿ ಮಲಗಿದ್ದ ಮುಖ್ಯ ಶಿಕ್ಷಕ; ಅಮಾನತು

“ಮಿಣ್ಯಂ ಗ್ರಾಮದಲ್ಲಿ ಹುಲಿಗಳ ಹತ್ಯೆ ಘಟನೆ ನೆಡೆದು ಇಂದಿಗೆ ಒಂದು ತಿಂಗಳು ಕಳೆದಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಅರಣ್ಯ ಸಚಿವರು ತಕ್ಷಣ ರಾಜೀನಾಮೆ ನೀಡಬೇಕಾಗಿತ್ತು, ಆದರೆ ಅರಣ್ಯ ಸಚಿವರು ತಮ್ಮ ಜವಬ್ದಾರಿಯನ್ನು ತಳ್ಳಿಹಾಕಿ ಕೇವಲ ಅಧಿಕಾರಿಗಳನ್ನು ಅಮಾನತಿಗೆ ಒಳಪಡಿಸುವ ಕ್ರಮ ಎಷ್ಟರ ಮಟ್ಟಿಗೆ ಸರಿ?” ಎಂದು ಪ್ರಶ್ನಿಸಿದರು.

ಇದನ್ನೂ ನೋಡಿ: ಬಿಹಾರ ಚುನಾವಣೇ | “ವಿಶೇಷ ತೀವ್ರ ಪರಿಷ್ಕರಣೆ”ಎನ್‌ಡಿಎ ಕೂಟದ ಹೊಸ ನಾಟಕ Janashakthi Media

Donate Janashakthi Media

Leave a Reply

Your email address will not be published. Required fields are marked *