ಬೆಂಗಳೂರು |ಮಾರುಕಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ : ಬೀದಿ ವ್ಯಾಪರಿಗಳಿಗೆ ಗುರುತಿನ ಚೀಟಿಗಳನ್ನು ನೀಡಿ

ಬೆಂಗಳೂರು: ಬೀದಿ ವ್ಯಾಪರಿಗಳಿಗೆ  ನಗರದಲ್ಲಿ  ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ (ಕೆಪಿಬಿವಿಎಸ್) ಅಧ್ಯಕ್ಷ ಬಾಬು ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಕಾನೂನುಬಾಹಿರವಾಗಿ ದಂಡ ವಿಧಿಸುತ್ತಿದ್ದಾರೆ. ಈಗಾಗಲೇ ಗುರುತಿನ ಚೀಟಿಗಳು ಮುದ್ರಣಗೊಂಡಿವೆ. ಆದರೂ ಬೀದಿ ವ್ಯಾಪಾರಿಗಳಿಗೆ ವಿತರಿಸಿಲ್ಲ. ಹಲವೆಡೆ ಎತ್ತಂಗಡಿಯನ್ನೂ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಇದನ್ನೂ ಓದಿ : ಜನೌಷಧ ಮುಚ್ಚುವ ಆದೇಶ‌ ರದ್ದತಿ ವಿರುದ್ಧ ಮೇಲ್ಮನವಿ: ಸಚಿವ ದಿನೇಶ್‌ ಗುಂಡೂರಾವ್

‘ನಗರದ ಎಲ್ಲ ಮಾರುಕಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.  ಗಾಂಧಿ ಬಜಾರ್‌ನ ಹೂವಿನ ವ್ಯಾಪಾರಿ ವನಜಾಕ್ಷಿ ಮಾತನಾಡಿ, ಮಹಿಳಾ ವ್ಯಾಪಾರಿಗಳಿಗೆ ಉಚಿತವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ಮಳೆ, ಚಳಿ, ಬಿಸಿಲುಗಳಿಂದ ರಕ್ಷಿಸಿಕೊಳ್ಳಲು ಛತ್ರಿ, ಟೆಂಟ್‌, ಟಾರ್ಪಲ್‌ಗಳನ್ನು ಅಳವಡಿಸಿಕೊಳ್ಳಲು ಪಾಲಿಕೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಕ್ಷಣಾ ಸಾಮಗ್ರಿಗಳನ್ನು ವಿತರಿಸಬೇಕು ಎಂದು ಶಿವಾಜಿನಗರ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಜಮೀರ್ ಆಗ್ರಹಿಸಿದರು.

ಬೀದಿ ವ್ಯಾಪಾರಿಗಳ ರಕ್ಷಣೆಗಾಗಿ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಬೇಕು. ಅವರ ಮೇಲಿನ ಕಿರುಕುಳ ತಡೆದು, ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಕೆಪಿಬಿವಿಎಸ್‌ನ ಕಾನೂನು ಸಲಹಾ ಅಧಿಕಾರಿ ವಿನಯ್ ಶ್ರೀನಿವಾಸ್ ತಿಳಿಸಿದರು.

‘ಡಿಸೆಂಬರ್‌ ಅಂತ್ಯದೊಳಗೆ ನಮ್ಮ ಎಲ್ಲ ಹಕ್ಕೊತ್ತಾಯಗಳನ್ನು ಈಡೇರಿಸದಿದ್ದಲ್ಲಿ, ಜನವರಿಯಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು’ ಎಂದು ಬೀದಿ ವ್ಯಾಪಾರಿಗಳು ಎಚ್ಚರಿಸಿದರು.

ಇದನ್ನೂ ನೋಡಿ : ಮುಟ್ಟಿನ ರಜೆ ಮಹಿಳೆಯರ ಹಕ್ಕು Janashakthi Media

 

Donate Janashakthi Media

Leave a Reply

Your email address will not be published. Required fields are marked *