ಅಕ್ರಮ ಅಸ್ತಿಗಳಿಕೆ -ತೆರಿಗೆ ವಂಚನೆ: ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ಆದಾಯ ಮೀರಿ ಅಕ್ರಮ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಸೆಪ್ಟೆಂಬರ್‌ 24 ಬೆಳಗ್ಗೆ ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.

ಪ್ರತಿಷ್ಠಿತ ಪಿಇಎಸ್​ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ

ಕಾಲೇಜಿನ ಮಾಲೀಕರ ಮೇಲೆ ದಾಳಿ

ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹನುಮಂತನಗರ ಸೇರಿದಂತೆ ಕೆಲ ಕಡೆಗಳ ದಾಳಿ ನಡೆದಿದೆ. ಅಕ್ರಮ

ಇದನ್ನೂ ಓದಿ: ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಬದ್ದ ಮಧು ಬಂಗಾರಪ್ಪ

ಹೊರ ರಾಜ್ಯಗಳ ಶಾಖೆ ಮೇಲೂ ದಾಳಿ

ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು , ಎಲೆಕ್ಟ್ರಾನಿಕ್ ಸಿಟಿ ಕಾಲೇಜ್ , ಹನುಮಂತನಗರ ಕಾಲೇಜ್ , ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆದಿದೆ.

ಬನಶಂಕರಿ ಬಿಡಿಎ ಕಾಂಪ್ಲೇಕ್ಸ್ ಬಳಿ ಪಿಇಎಸ್ ಶಿಕ್ಷಣ ಸಂಸ್ಥೆ ಮಾಜಿ ಮುಖ್ಯಸ್ಥ ದಿವಂಗತ ದೊರೆಸ್ವಾಮಿ ನಾಯ್ಡು ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಮಗ ಜವಹರ್ ದೊರೆಸ್ವಾಮಿ ಅವರನ್ನು ಕೂಡ ವಿಚಾರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ದೊರೆಸ್ವಾಮಿ‌ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.ಕಾಲೇಜಿನ ಹಣಕಾಸು ಲೆಕ್ಕ, ಪೀಠೋಪಕರಣಗಳ ಖರೀದಿ ಹಾಗೂ ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಖರ್ಚು ಮಾಡಿರುವ ಹಣದ ಬಗ್ಗೆ ವಿವರಣೆಗಳನ್ನ ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ ಎನ್ನಲಾಗಿದೆ.

100 ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

ಚೆನ್ನೈ , ಮಂಗಳೂರು, ಆಂಧ್ರ ಪ್ರದೇಶಗಳಿಂದ ಸುಮಾರು 100 ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದಾಯಕ್ಕೆ‌ ಮೀರಿದ ಆಸ್ತಿಗಳಿಕೆ ಆರೋಪ ಹಾಗೂ ತೆರಿಗೆ ವಂಚನೆ ಮಾಡಿರೋ ಆರೋಪ ಹಿನ್ನಲೆ ದಾಳಿ ನಡೆದಿದೆ.

ಇದನ್ನೂ ನೋಡಿ: ಕೋಲಾರ | ಅಂಗೈ ಮೂಳೆ ಮುರಿದು ಆರು ದಿನ ಆದ್ರು ಚಿಕಿತ್ಸೆ ನೀಡದ ಸರ್ಕಾರಿ ಆಸ್ಪತ್ರೆ Janashakthi Media

Donate Janashakthi Media

Leave a Reply

Your email address will not be published. Required fields are marked *