ಇಂದು ಉಪ ರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್‌ 10ರಂದು ಕೊನೆಗೊಳ್ಳಲಿದ್ದು, ಇಂದು(ಆಗಸ್ಟ್‌ 06) ಚುನಾವಣೆ ನಡೆಯಲಿದೆ. ಮತದಾನ ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದ್ದು, ಇಂದು ಸಂಜೆಯೇ ಫಲಿತಾಂಶ ಘೋಷಣೆಯಾಗಲಿದೆ.

ಸಂಜೆ ವೇಳೆಗೆ ಚುನಾವಣಾಧಿಕಾರಿಗಳು ಮುಂದಿನ ಉಪ ರಾಷ್ಟ್ರಪತಿಗಳ ಹೆಸರನ್ನು ಪ್ರಕಟಿಸಲಿದ್ದಾರೆ. ಕಣದಲ್ಲಿ ಎನ್‌ಡಿಎ ಪರವಾಗಿ ಪಶ್ಚಿಮ ಬಂಗಾಳದ ಮಾಜಿ ಜಗದೀಪ್‌ ಗವರ್ನರ್ ಧನಕರ್ ಮತ್ತು ವಿರೋಧ ಪಕ್ಷಗಳ ಸಹಮತದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಸ್ಪರ್ಧಿಸಿದ್ದಾರೆ. ನೂತನ ಉಪ ರಾಷ್ಟ್ರಪತಿಗಳ ಆಯ್ಕೆಗೆ ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಹಾಕಲಿದ್ದಾರೆ. ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

80 ವರ್ಷದ ಮಾರ್ಗರೇಟ್ ಆಳ್ವ ಅವರು ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದದ್ದಾರೆ. ಕಾಂಗ್ರೆಸ್‌, ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಭಾರತ ಕಮ್ಯೂನಿಸ್ಟ್‌ ಪಕ್ಷ(ಸಿಪಿಐ), ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ವಿರೋಧ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ ಎರಡು ದಿನಗಳ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆಳ್ವಾ ಅವರಿಗೆ ನೀಡುತ್ತಿದೆ. ಐಎಂಐಎಂ ಕೂಡ ಆಳ್ವಾ ಅವರಿಗೆ ಬೆಂಬಲ ನೀಡಿದೆ.

71 ವರ್ಷದ ಧನ್‌ಕರ್ ಅವರನ್ನು ಸಂಯುಕ್ತ ಜನತಾ ದಳ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ ಮತ್ತು ಶಿವಸೇನೆಯಂತಹ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ, ಎನ್‌ಡಿಎ ಅಭ್ಯರ್ಥಿಗೆ ಬೆಂಬಲವನ್ನು ಸೂಚಿಸಿದ್ದಾರೆ.

ಲೋಕಸಭೆಯಲ್ಲಿ 23 ಮತ್ತು ರಾಜ್ಯಸಭೆಯಲ್ಲಿ 16 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದೆ.

ಮಾರ್ಗರೇಟ್‌ ಆಳ್ವ ಅವರನ್ನು ಬೆಂಬಲಿಸುತ್ತಿರುವ ಎಲ್ಲ ವಿರೋಧ ಪಕ್ಷದ ಸಂಸದರಿಗೆ ಧನ್ಯವಾದ ಅರ್ಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಳೆದ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ಮತ್ತೊಂದೆಡೆ, ಧನಕರ್ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಹಲವಾರು ಬಿಜೆಪಿ ಸಂಸದರನ್ನು ಭೇಟಿ ಮಾಡಿದರು.

Donate Janashakthi Media

Leave a Reply

Your email address will not be published. Required fields are marked *