ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ನಾಟಕ ಮಾಡಿದರೆ ಜೈಲು ಕಂಬಿ ಗ್ಯಾರೆಂಟಿ:ಸಚಿವ ಎಂ.ಬಿ ಪಾಟೀಲ್

ವಿಜಯಪುರ:ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯಲ್ಲ. ಇನ್ಮುಂದೆ ಇಂಥ ನಾಟಕ ಮಾಡಿದರೆ ಜೈಲು ಗ್ಯಾರಂಟಿ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷ ಸೂಲಿಬೆಲೆ ಏನ್‌ ಮಾಡಿದ್ದಾರೆ ಕೇಳಿ, ನಾಲ್ಕು ವರ್ಷ ಅನಾಹುತ ಮಾಡಿದ್ದು, ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ದೂರಿದರು. ಇವರಿಗೇನು ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್‌, ಹಲಾಲ್‌, ಉರಿಗೌಡ, ನಂಜೇಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಬೆಂಬಲವನ್ನು ನೀಡಿತ್ತು ಎಂದು ಆರೋಪಿಸಿದರು. 

ಇದನ್ನೂ ಓದಿಬಹುರೂಪಿ ನಾಟಕೋತ್ಸವಕ್ಕೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *