ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ: ಸಂವಿಧಾನ ವಿಧಿ 370 ಮರುಸ್ಥಾಪನೆ

ಶ್ರೀನಗರ: ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಸರನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್‌ ಚೌಧರಿ ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು. ವಿಧಾನಸಭೆ

ಚುನಾಯಿತ ಪ್ರತಿನಿಧಿಗಳೊಂದಿಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ಈ ನಿಬಂಧನೆಗಳನ್ನು ಮರುಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ತರಲು ಸಂವಾದವನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಯಾವುದೇ ಪುಕ್ರಿಯೆಯು ರಾಷ್ಟ್ರೀಯ ಏಕತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದಿದೆ.  ವಿಧಾನಸಭೆ

ಇದನ್ನೂ ಓದಿ: “ಟಾಟಾ ಸಾಮ್ರಾಜ್ಯದ ಬೆಳವಣಿಗೆಗೆ ” ಬೆವರು, ರಕ್ತ ಸುರಿಸಿದ ಕೋಟ್ಯಾಂತರ ಜನರ ನೆನಪು | ಭಾಗ 01

ಉಪ ಮುಖ್ಯಮಂತ್ರಿ ಅವರು ನಿರ್ಣಯ ಮಂಡಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ತಮ್ಮ ಕುರ್ಚಿಯಿಂದ ಎದ್ದು ನಿಂತು ನಿರ್ಣಯವನ್ನು ಮಂಡಿಸುವುದನ್ನು ವಿರೋಧಿಸಿದರು. ಇದು ಈ ದಿನದ ಕಲಾಪ ಭಾಗವಲ್ಲ ಎಂದು ಅವರು ಹೇಳಿದರು.

ಬಿಜೆಪಿ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆ, ಸ್ಪೀಕರ್ ಅಬ್ದುರ್ ರಹೀಮ್ ರಾಥರ್‌ ಬಿಜೆಪಿ ನಾಯಕರೊಬ್ಬರಿಗೆ ಈ ವಿಷಯದ ಬಗ್ಗೆ ಮಾತನಾಡಲು ಹೇಳಿದರು. ಆದರೆ, ಬಿಜೆಪಿ ಸದಸ್ಯರು ಧರಣಿ ಹಾಗೂ ಘೋಷಣೆಗಳನ್ನು ಮುಂದುವರಿಸಿದರು. ಪ್ರತಿಭಟನೆಯ ನಡುವೆಯೇ ಸಭಾಧ್ಯಕ್ಷರು, ‘ನೀವು ಮಾತನಾಡಲು ಬಯಸದಿದ್ದರೆ ಮತಕ್ಕೆ ಹಾಕುತ್ತೇನೆ’ ಎಂದರು. ಬಿಜೆಪಿ ಸದಸ್ಯರ ಪ್ರತಿಭಟನೆ ಮುಂದುವರಿದಾಗ ಸ್ಪೀಕರ್ ನಿರ್ಣಯವನ್ನು ಮತಕ್ಕೆ ಹಾಕಿದರು. ಬಿಜೆಪಿಯ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆಯೇ ಸದನದಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ನಿರ್ಣಯ ಅಂಗೀಕರಿಸಿದ ನಂತರ ಸ್ಪೀಕರ್ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು. ಆಗಸ್ಟ್ 15, 2019 ರಂದು ಕೇಂದ್ರ ಸರ್ಕಾರವು ಸಂವಿಧಾನ ವಿಧಿ 370 ಮತ್ತು 35ಎಯನ್ನು ರದ್ದುಗೊಳಿಸಿತು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪುದೇಶಗಳಾಗಿ ವಿಭಜಿಸಿತು.

ಇದನ್ನೂ ನೋಡಿ: ಮರಕುಂಬಿ ಪ್ರಕರಣದ ತೀರ್ಪು :ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಉಳಿಸಿದೆ – ಆರ್‌ ಕೆ ದೇಸಾಯಿ Janashakthi Media

Donate Janashakthi Media

Leave a Reply

Your email address will not be published. Required fields are marked *