ಶ್ರೀ ನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ. ಜಮ್ಮುವಿನ ಎಲ್ಲಾ ಗಡಿ ಚೆಕ್ಪೋಸ್ಟ್ಗಳಲ್ಲಿ ಪುರುಷ ಪೊಲೀಸರೊಂದಿಗೆ ಮೊದಲ ಬಾರಿ ಮಹಿಳಾ ಸಿಬ್ಬಂದಿಯನ್ನೂ ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಮಹಿಳಾ ಮಾದಕವಸ್ತು ಕಳ್ಳಸಾಗಣೆದಾರರ ಮೇಲೆ ಕಣ್ಣಿಡಲು ಮತ್ತು ರಾತ್ರಿಯಲ್ಲಿ ಮಹಿಳೆಯರಿಗೆ ಸಹಾಯ ಮಾಡಲು ಜಮ್ಮು ನಗರದ ಚೆಕ್ಪೋಸ್ಟ್ಗಳಲ್ಲಿ ಮಹಿಳೆಯರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರನ್ನು ನೇಮಿಸಲಾಗಿದೆ ಅವರು ಹೇಳಿದ್ದಾರೆ. ಪ್ರತಿ ಚೆಕ್ಪೋಸ್ಟ್ನಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸುತ್ತಾರೆ.
ಇದನ್ನೂ ಓದಿ : ಜಮ್ಮು ಕಾಶ್ಮೀರ ಜನತೆ ಮೇಲಿನ ಕ್ರೌರ್ಯ ನ್ಯಾಯಾಂಗ ಗಮನಿಸುತ್ತಿಲ್ಲ: ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
ಇಲ್ಲಿಯವರೆಗೆ, ಜಮ್ಮು ನಗರದ 12 ಪ್ರಮುಖ ಚೆಕ್ಪೋಸ್ಟ್ಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳ ಮೇಲೆ ಕಣ್ಣಿಡಲು ಮಾತ್ರವಲ್ಲದೆ ಮಹಿಳೆಯರಿಗೆ, ವಿಶೇಷವಾಗಿ ರಾತ್ರಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳಾ ಡ್ರಗ್ ಡೀಲರ್ಗಳ ಶಾಮೀಲಾಗಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಕಾನ್ಸ್ಟೆಬಲ್ಗಳ ನಿಯೋಜನೆಯಿಂದ ಅನುಮಾನಾಸ್ಪದ ಚಲನವಲನಗಳ ಮೇಲೆ ನಿಗಾ ಇಡಲು ಮತ್ತು ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.