ಜನಮನ ಸೆಳೆದ ಮಕ್ಕಳ ಸಂತೆ

ವರದಿ : ಗೋಪನಹಳ್ಳಿ ಶಿವಣ್ಣ 

ಚಳ್ಳಕೆರೆ : ಚಳ್ಳಕೆರೆ ನಗರದ ಎಸ್ ಆರ್ ಎಸ್ ವಿದ್ಯಾಸಂಸ್ಥೆ ಯ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಂದ ಚಳ್ಳಕೆರೆ ನಗರದ ತಾಲೂಕು ಕಚೇರಿ ಹಾಗೂ ಬೆಂಗಳೂರು ರಸ್ತೆಯ ಬಸವೇಶ್ವರ ವೃತ್ತದಲ್ಲಿ ಬುಧವಾರ ನಡೆದ ಮಕ್ಕಳ ಸಂತೆಯಲ್ಲಿ ವ್ಯಾಪಾರ ಜೋರಾಗಿಯೆ ನಡೆಯಿತು.

ಸಂತೆಯಲ್ಲಿ ಮೂಲಂಗಿ.ಕ್ಯಾರೇಟ್.ಬದನೇಕಾಯಿ. ನಿಂಬೆಹಣ್ಣು. ನುಗ್ಗೆ ಸೊಪ್ಪು,ಕೊತ್ತಂಬರಿ ಸೇರಿದಂತೆ ವಿವಿಧ ತರಕಾರಿ ಮಾರಾಟ ಮಾಡಲಾಯಿತು. ವಿದ್ಯಾರ್ಥಿಗಳು ಗ್ರಾಹಕರಿಗೆ, ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.

ಪರಸ್ಪರ ಸ್ವರ್ಧಾ ಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಾಪಾರ ಮಾಡಬೇಕು ಎಂಬ ಛಲದಿಂದ ಗ್ರಾಹಕರನ್ನು ಕರೆದು ತಮ್ಮ ಬಳಿ ಖರೀದಿಸಲು ಒತ್ತಾಯಿಸುತ್ತಿದ್ದರು. ಮುಖ್ಯ ಶಿಕ್ಷಕ ಪ್ರಭಾಕರ್ ಮಾತನಾಡಿ ‘ಮಕ್ಕಳಲ್ಲಿ ವ್ಯಾವಹಾರ ಜ್ಞಾನ ಅಭಿವೃದ್ದಿಗೆ ಮಕ್ಕಳ ಸಂತೆ ಹೆಚ್ಚು ಪ್ರೇರಣೆ ನೀಡುತ್ತದೆ ಮಕ್ಕಳನ್ನು ಪಠ್ಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಸಮಗ್ರ ಶಿಕ್ಷಣದ ಭಾಗವಾಗಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಪ್ರಗತಿಗೆ ‘ಮಕ್ಕಳು ಜೀವನ ನಡೆಸಲು ವ್ಯವಹಾರ ಜ್ಞಾನದ ಅರಿವು ಮೂಡಿಸಲು ಪೋಷಕರು ಮಕ್ಕಳನ್ನು ಅಂಗಡಿಗೆ ಕಳುಹಿಸಿದರೆ ವ್ಯಾಪಾರ ಮಾಡಿ ಸಾಮಗ್ರಿ ತರುವ ಶಕ್ತಿ ಬೆಳೆಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಶಾಸ್ತ್ರಕ್ಕೆ ಬೇಡಿಕೆ ಹೆಚ್ಚುತ್ತಿದೆ. ಅನೇಕ ಉದ್ಯಮಗಳಲ್ಲಿ ವಾಣಿಜ್ಯ ಪದವಿಗೆ ಆದ್ಯತೆ ನೀಡಲಾಗುತ್ತಿದೆ. ಮಕ್ಕಳಲ್ಲಿ ಪ್ರಾಯೋಗಿಕವಾಗಿ ವ್ಯವಹಾರ ಜ್ಞಾನ ಬೆಳೆಸಲು ಮಕ್ಕಳ ಸಂತೆಗಳು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಇಬ್ಬರ ಜಗಳದಲ್ಲಿ ಗರ ಹಿಡಿದಿರುವ ಸ್ವಚ್ಛ ಭಾರತ್‌ ಅಭಿಯಾನ

Donate Janashakthi Media

Leave a Reply

Your email address will not be published. Required fields are marked *