ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಹಿರಿಯೂರು : ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಈ ವೇಳೆ ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನೂತನ ಜಿಲ್ಲೆ ರಚನೆ ಬಗ್ಗೆ ಮಾಹಿತಿ ಇಲ್ಲ. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ನಾನು ಮಾತನಾಡುತ್ತೇನೆ’ ಎಂದು ಪ್ರತಿಕ್ರೀಯಿಸಿದರು.

Donate Janashakthi Media

Leave a Reply

Your email address will not be published. Required fields are marked *