ಜನರಲ್ಲಿ ಕೋವಿಡ್ ಲಸಿಕೆಯ ಕುರಿತು ಜನಜಾಗೃತಿ ರಥಕ್ಕೆ ಚಾಲನೆ

ಬಳ್ಳಾರಿ: ಕೋವಿಡ್‌ ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ಇರುವ ಅತ್ಯಂತ ಪ್ರಮುಖ ಮಾರ್ಗ ಲಸಿಕೆಯೊಂದೆ ಆಗಿದೆ.  ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಉಂಟು ಮಾಡುವುದಿಲ್ಲ. ಸಾರ್ವಜನಿಕರೆಲ್ಲರೂ ಯಾವುದೇ ಭಯವಿಲ್ಲದೆ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಕರೆ ನೀಡಿದರು.

ಬಳ್ಳಾರಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವರ್ಲ್ಡ್‌ ವಿಷನ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಕೋವಿಡ್ ರೋಗದ ಕುರಿತು ಹಾಗೂ ಕೋವಿಡ್ ಲಸಿಕೆ‌ ಕುರಿತು ಜನಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಿದರು.

ಇದನ್ನು ಓದಿ: ನಾಸ್ಕಾಂ ವರದಿ: 2022ಕ್ಕೆ ದೇಶದಲ್ಲಿ 30 ಲಕ್ಷ ಐಟಿ ಉದ್ಯೋಗ ನಷ್ಟ?

ಜಾಗೃತಿ ರಥವು ತಾಲೂಕಿನಾದ್ಯಂತ ಸುಮಾರು 27 ಹಳ್ಳಿಗಳಲ್ಲಿ ಸಂಚರಿಸಲಿದೆ. ಜಾಗೃತಿ ರಥದಲ್ಲಿ ಕೋವಿಡ್‌ ಸಾಂಕ್ರಾಮಿಕ ರೋಗದ ಮಾಹಿತಿಗಳು, ಭಿತ್ತಿಪತ್ರಗಳನ್ನು ಒಳಗೊಂಡಿರುತ್ತವೆ. ಅಲ್ಲದೆ, ಮೈಕ್ ಮೂಲಕ ಮಾಡಲಿದ್ದು, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಂಚರಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ರಾಜಶೇಖರ ರೆಡ್ಡಿ, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟೀಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ವರ್ಲ್ಡ್‌ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕರಾದ ಪ್ರೇಮಲತಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

Donate Janashakthi Media

Leave a Reply

Your email address will not be published. Required fields are marked *