ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬರೋಬ್ಬರಿ ಐದು ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಅವರು ಬರೋಬ್ಬರಿ ಐದು ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದು, ಅವರ ಕುಟುಂಬಸ್ಥರು, ಸಂಬಂಧಿಗಳ ಮೂಲಕ ಐದು ಸಾವಿರ ಕೋಟಿ ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ ಎಂದು ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಇದನ್ನು ಓದಿ : ಕುರಿ ಕಾಯುವವರ ಮಗ ಎರಡನೇ ಬಾರಿಗೆ ಸಿಎಂ ಆಗಿದ್ದೇ ತಪ್ಪಾ? ನಾನೇನು ತಪ್ಪು ಮಾಡಿದ್ದೇನೆ ಎಂದ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಿನಾಮೆ ಕೇಳಿ ಕೇಳಿ ಸಾಕಾಗಿದೆ. ಹಿಂದೆ ಅಡ್ವಾನಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗೂ ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು ಎಂದರು.
ಈಗ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿಯಾಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೋಟಿ ಅಲ್ಲ 82 ಕೋಟಿ ಎಂದು ಒಪ್ಪಿಕೊಂಡಿದ್ದಾರೆ. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ರೆಡ್ಡಿ ಆರೋಪಿಸಿದರು.
ಇದನ್ನು ನೋಡಿ : ಮುಡಾ ಪ್ರಕರಣ | ದ್ವೇಷ ಸಾಧನೆಗೆ ರಾಜಕೀಯ ಕುಟುಂಬದ ಹೆಣ್ಣುಮಕ್ಕಳನ್ನು ಎಳೆದುತರಬೇಡಿ; ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ