ಬೆಂಗಳೂರು: 15ನೇ ವಿಧಾನಮಂಡಲದ ಬಜೆಟ್ ಅಧಿವೇಶನದ ಆರಂಭ ದಿನವಾದ ಇಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಈ ವೇಳೆ ರಾಜ್ಯ ಬಿಜೆಪಿ ಸರ್ಕಾರ ಕೈಗೊಂಡ ಕಾರ್ಯಗಳು ಹಾಗೂ ಸಾಧನೆಗಳನ್ನು ವಿವರಿಸಿದರು.
ಸರ್ಕಾರ ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದ್ದು, ಅಭಿವೃದ್ಧಿ ಪಥದಲ್ಲಿ ರಾಜ್ಯ ಮುಂಚೂಣಿಯಾಗಿ ಮುನ್ನಡೆಯುತ್ತಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು ನನ್ನ ಸರ್ಕಾರ ಅನುಸರಿಸುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಅಮೃತ ಕಾಲದ ಗುರಿಯ ಪಥ ಪಥ ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ. ರೈತ ಮತ್ತು ಅವನ ಕುಟುಂಬವನ್ನು ಸದೃಢಗೊಳಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು, ಮುಂತಾದ ವಿವಿಧ ವರ್ಗಗಳಿಗೆ ವಿಸ್ತರಿಸಲಾಗಿದೆ. ಅದರಂತೆ 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೇರ ನಗದು ಮೂಲಕ ವರ್ಗಾಯಿಸಲಾಗಿದೆ. ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ, 400 ಕೋಟಿ ರೂಪಾಯಿಗಳನ್ನು ಒದಗಿಸಿದ್ದು, 386.98 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಿಂದ 53.22 ಲಕ್ಷ ರೈತರುಗಳಿಗೆ ನೇರ ನಗದು ವರ್ಗಾವಣೆ ಮೂಲಕ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಸಂಸತ್ ಬಜೆಟ್ ಅಧಿವೇಶನ: 2022–23ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ ನಿರ್ಮಲಾ ಸೀತಾರಾಮನ್
ಕೃಷಿ ಸಂಜೀವಿನಿ ಯೋಜನೆಯಡಿ ಕೀಟ, ರೋಗ, ಕಳೆಬಾಧೆ ಮತ್ತು ಮಣ್ಣಿನ ಪೋಷಕಾಂಶದ ಸಮರ್ಪಕ ನಿರ್ವಹಣೆಗಾಗಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳ ಸ್ಥಾಪನೆಗೆ ಮುಂದಾಗಿರುವುದು ಮತ್ತು 2022-23ನೇ ಸಾಲಿಗೆ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯವನ್ನು ಅನುಷ್ಠಾನ ಮಾಡಲಾಗಿದೆ.
ಸರ್ಕಾರವು ಅಮೃತ ಮಹೋತ್ಸವದ ಅಂಗವಾಗಿ 750 ಅಮೃತ ರೈತ / ಮೀನುಗಾರರ / ನೇಕಾರರ ಉತ್ಪಾದಕರ ಸಂಸ್ಥೆಗಳನ್ನು ರಚಿಸಿರುವುದಾಗಿ ಘೋಷಿಸಿದೆ. ಇಲ್ಲಿಯವರೆಗೆ 364 ಸಂಸ್ಥೆಗಳನ್ನು ನೊಂದಾಯಿಸಲಾಗಿದೆ. 24.57 ಕೋಟಿ ರೂಪಾಯಿಗಳ ವೆಚ್ಚ ಮಾಡಲಾಗಿದೆ. ಪುಸಕ್ತ ಸಾಲಿನಿಂದ ರಾಯಚೂರು ಕೃಷಿ ವಿಶ್ವ ವಿದ್ಯಾನಿಲಯದ ಅಧೀನದಲ್ಲಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ನೂತನವಾಗಿ ಕೃಷಿ ಈ ಕಾಲೇಜನ್ನು ಪ್ರಾರಂಭಿಸಲಾಗಿದೆ.
ಇದನ್ನು ಓದಿ: ಚಳಿಗಾಲ ಅಧಿವೇಶನ; 9 ದಿನದಲ್ಲಿ 41 ಗಂಟೆ 21 ನಿಮಿಷ ಮಾತ್ರ ಚರ್ಚೆ
ಪ್ರಸಕ್ತ ಸಾಲಿನಲ್ಲಿ 50,335 ರೈತರ ತಾಕುಗಳಲ್ಲಿ ಸುಮಾರು 27,910 ಹೆಕ್ಟೇರ್ ಪ್ರದೇಶದಲ್ಲಿ ಇಲಾಖೆಯ ವತಿಯಿಂದ ತೋಟಗಾರಿಕಾ ಬೆಳೆಗಳನ್ನು ವಿಸ್ತರಿಸಲಾಗಿದೆ. 60 ಲಕ್ಷ ಸಂಖ್ಯೆ ತೋಟಗಾರಿಕ ಬೆಳೆಗಳ ಸಸಿ | ಕಸಿಗಳನ್ನು ರೈತಾಪಿ ವರ್ಗಕ್ಕೆ ವಿತರಿಸಲಾಗಿದೆ ಮತ್ತು ಮಳೆ ನೀರನ್ನು ಸಂರಕ್ಷಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಲು 484 ಸಂಖ್ಯೆಯ ಕೃಷಿ ಹೊಂಡ ಘಟಕಗಳನ್ನು ನಿರ್ಮಿಸಲಾಗಿದೆ ಎಂದರು.
ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಅಶಕ್ತ ಅನಾರೋಗ್ಯ ಪೀಡಿತ ನಿರ್ಗತಿಕ, ರೈತರು ಸಾಕಲಾಗದ ಜಾನುವಾರುಗಳನ್ನು ಸಂರಕ್ಷಣೆ ಮಾಡಲು ರಾಜ್ಯ ಸರ್ಕಾರದಿಂದ 100 ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಗೋ ಶಾಲೆಗಳಲ್ಲಿರುವ ಜಾನುವಾರುಗಳನ್ನು ಸರ್ಕಾರಿ ಗೋ ಸಂರಕ್ಷಿಸಲು ಪುಣ್ಯ ಕೋಟಿ ಯೋಜನೆ ಪ್ರಾರಂಭಿಸಲಾಗಿದೆ.
ಚರ್ಮ ಗಂಟು ರೋಗ ನಿಯಂತ್ರಣಕ್ಕೆ ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ. ಪರಿಹಾರ ಧನವಾಗಿ 37 ಕೋಟಿ ಬಿಡುಗಡೆ ಮಾಡಲಾಗಿದೆ. ಮೀನುಗಾರರ ಆದಾಯ ಹೆಚ್ಚಿಸಲು 2758.70 ಲಕ್ಷ ಸಹಾಯಧನ ನೀಡುವ ಮೂಲಕ ಮತ್ಸ್ಯ ಸಂಪದ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗಿದೆ.
2022-23 ಸಾಲಿನಲ್ಲಿ 15,066 ಕೋಟಿ ಅಲ್ಪಾವಧಿಯ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ಡಿಸೆಂಬರ್ ಅಂತ್ಯಕ್ಕೆ 20.19 ಲಕ್ಷ ರೈತರಿಗೆ ವಿತರಣೆ. 29,638 ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 1215 ಕೋಟಿ ಸಾಲ ವಿತರಿಸಲಾಗಿದೆ. ಯಶಸ್ವಿನಿ ಯೋಜನೆಯಡಿ 32.60 ಲಕ್ಷ ಸದಸ್ಯರನ್ನು ನೊಂದಾಯಿಸಲಾಗಿದೆ. ಜನವರಿ ತಿಂಗಳಿನಿಂದ ಚಿಕಿತ್ಸಾ ಸೌಲಭ್ಯ ಪ್ರಾರಂಭಿಸಲಾಗಿದೆ.
ಇದನ್ನು ಓದಿ: ವಿಧಾನಮಂಡಲ ಅಧಿವೇಶನ; ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆ ಎಂದು?
ಅಮೃತ ಯೋಜನೆಯಡಿ 750 ಅಂಗನವಾಡಿ ಕೇಂದ್ರ ಮೇಲ್ದರ್ಜೆಗೆ ಏರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂಪಾಯಿನಂತೆ 7.5 ಕೋಟಿ ನೆರವು. 4244 ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ 268.98 ಕೋಟಿ ಅನುದಾನ ಮಂಜೂರಾತಿ ಮಾಡಲಾಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್ ಅನುಮೋದನೆ, 271 ನಮ್ಮ ಕ್ಲಿನಿಕ್ ಕಾರ್ಯಾರಂಭ ಮಾಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿನ ಸರ್ಕಾರದ ಕೆಲಸಗಳ ಬಗ್ಗೆ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಚಯಿಸಿದರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಡಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು ಹಾಜರಿದ್ದರು.
ಅಗಲಿದ ಗಣ್ಯರಿಗೆ ಸಂತಾಪ
ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ, ಪೆರಿಟಿ ತಿಮ್ಮಪ್ಪ ಹೆಗಡೆ, ಶಿವಾನಂದ್ ಅಂಬಡಗಟ್ಟಿ, ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಡಾ. ಎಂಕೆ ಪಾಂಡುರಾಂಗ ಶೆಟ್ಟಿ, ವಾಣಿ ಜಯರಾಂ, ಬಿ.ಕೆ.ಎಸ್ ವರ್ಮಾ, ಹಿರಿಯ ಸಂಶೋಧಕ ಸಾಹಿತಿ ಡಾ.ಚಂದ್ರಶೇಖರ ಸಾರಾ ಅಬೂಬಕ್ಕರ್, ಚಂದ್ರಶೇಖರ ಕೆದ್ಲಾಯ, ಕೆವಿ ತಿರುಮಲೇಶ್ ಅವರಿಗೆ ಸಂತಾಪ ಸೂಚಿಸಲಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ