ಮಂಡ್ಯ: ಈಗಾಗಲೇ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು, ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿಯೇ ನಡೆಯುತ್ತಿದೆ. ಜೆಡಿಎಸ್ ಶಾಸಂಕಾ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜಾತಿ ವಿಚಾರಗಳ ಬಗ್ಗೆ ಮಾಡುವುದನ್ನು ಕಡಿಮೆ ಮಾಡಬೇಕೆಂದು ಸ್ವಪಕ್ಷದ ಶಾಸಕ ಡಿ.ಸಿ.ತಮ್ಮಣ್ಣ ಮನವಿ ಮಾಡಿದ್ದಾರೆ.
ಮದ್ದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಲು ಆರ್ಎಸ್ಎಸ್ ಹುನ್ನಾರ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನು ಓದಿ:ಕೊಪ್ಪಳದಲ್ಲಿ ನಿಲ್ಲದ ‘ದಲಿತರ ಮೇಲೆ ದೌರ್ಜನ್ಯ’ : ಮಹಿಳೆಯ ಮೇಲೆ ಚಪ್ಪಲಿಯಿಂದ ಹಲ್ಲೆ
ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ನಾನಂತು ಬ್ರಾಹ್ಮಣರ ವಿರೋಧಿಯಂತೂ ಅಲ್ವೇಅಲ್ಲಾ. ಜಾತಿ ವಿಚಾರ ಬಂದಾಗ ಮಾತನಾಡುವುದನ್ನು ನಾವು ಕಡಿಮೆ ಮಾಡಬೇಕು. ಈ ಬಗ್ಗೆ ಕುಮಾರಸ್ವಾಮಿಯವರಿಗೂ ನಾನು ಮನವಿ ಮಾಡುತ್ತೇನೆ. ಬ್ರಾಹ್ಮಣರ ಸಂಸ್ಕೃತಿಯನ್ನು ಇಷ್ಟಪಡುವವನು ನಾನು ಎಂದಿದ್ದಾರೆ.
ಕುಮಾರಸ್ವಾಮಿ ಅವರ ಹೇಳಿಕೆ ಸದ್ಯ ವಾಕ್ಸಮರಕ್ಕೆ ಹೊಸ ಅಸ್ತ್ರವಾಗಿದ್ದು, ಇದನ್ನು ಈಗ ಬಿಜೆಪಿ ಹಾಗೂ ಬ್ರಾಹ್ಮಣ ಸಮುದಾಯ ಬಳಸಿಕೊಂಡು ತಿರುಗಿಬಿದ್ದಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ನಾನು ಕೊಟ್ಟ ಹೇಳಿಕೆ ನೀಡಿ ನಾನು ಒಂದು ಸಮಾಜದ ಬಗ್ಗೆ ಅಗೌರವ ತೋರಿಸಿಲ್ಲ. ಈ ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ಬೆಳವಣಿಗೆಯನ್ನು ನಾವು ಕಾಣುತ್ತಿದ್ದೇವೆ. ಬ್ರಾಹ್ಮಣ ಸಮಾಜದ ಬಗ್ಗೆ ಅಪಮಾನ ಮಾಡುವ ಉದ್ದೇಶ ನನಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪುಸ್ತಕದಲ್ಲಿ ಅನೇಕ ತಿರುಚುವ ಕೆಲಸ ಆಯ್ತು. ಇಂಥಹ ವ್ಯಕ್ತಿಗಳ ಬಗ್ಗೆ ಎಚ್ಚರ ಇರಲಿ ಎಂದಷ್ಟೇ ಹೇಳಿರುವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ