ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ. 2017 ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆ ಇತ್ತು. ಜಾತಿ ಗಣತಿ ಮಾಡುವ ಅಧಿಕಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿದೆ ಅದನ್ನು ತಪ್ಪಿಸಲು ಇವರು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳಿ ಉದ್ದೇಶ ಒಂದು ಆದೇಶ ಒಂದು ಆಗಿರುವುದರಿಂದ ಈ ಗೊಂದಲ ಸೃಷ್ಟಿಯಾಯಿತು. ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ ಮಾಡಲಿಲ್ಲ. ಆಗ ವರದಿಯ ಬಗ್ಗೆ ಸಾಕಷ್ಡು ಗೊಂದಲ ಇತ್ತು. ಈಗ ಕೊಟ್ಟಿರುವ ವರದಿಯಲ್ಲಿಯೂ ಗೊಂದಲ ಇದೆ. ಇವರು 5.82 ಕೋಟಿ ಜನರನ್ನು ಸಂಪರ್ಕ ಮಾಡಿದ್ದೇವೆ ಅಂತ ಹೇಳುತ್ತಾರೆ. ಆದರೆ, ಬಹುತೇಕ ಜನರು ತಮ್ಮನ್ನು ಸಂಪರ್ಕ ಮಾಡಿಲ್ಲ ಎನ್ನುತ್ತಾರೆ. ಈಗ ಕೊಟ್ಟಿರುವ ವರದಿ ಚೌ ಚೌ ವರದಿ ಎಂದಿದ್ದಾರೆ.

ಡಾಟಾ ಕಾಂತರಾಜ ಅವರದು, ಜಯಪ್ರಕಾಶ್ ಹೆಗ್ಡೆ ಅವರು ವರದಿ ನನ್ನದು ಅಂತ ಹೇಳಿದ್ದಾರೆ. ಸಿಎಂ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಿಸಿ ರಾಜಕೀಯ ಕಾರಣಕ್ಕೆ ವರದಿ ಪಡೆದಿದ್ದಾರೆ‌ ಎಂದು ಆರೋಪಿಸಿದರು.

ಮಾಜಿ ಸಿಎಂ ಹೇಳಿಕೆಗೆ ಸಾಮಾಜಿಕ ಜಾತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಜಾತಿ ಸಮೀಕ್ಷೆಯಿಂದ‌ ಬಿಜೆಪಿಗೆ ನಷ್ಟವಾಗುವ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದರೆ. ಮನುವಾದಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಆಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

Donate Janashakthi Media

Leave a Reply

Your email address will not be published. Required fields are marked *