ಜಾತಿ ಸಮೀಕ್ಷೆ : ಸಿದ್ದರಾಮಯ್ಯಗೆ ವರದಿ ಹಸ್ತಾಂತರಿಸಿದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಸಮೀಕ್ಷೆ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯನ್ನು ಅಧಿಕೃತವಾಗಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು. ಜಾತಿ

ವಿಧಾನಸೌಧಕ್ಕೆ ಎರಡು ಬಾಕ್ಸ್ ವರದಿ ಪ್ರತಿಗಳ ಜೊತೆಗೆ ಆಗಮಿಸಿದ ಕೆ ಜಯಪ್ರಕಾಶ್‌ ಹೆಗ್ಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ತೆರಳಿ ವರದಿಯ ಪ್ರತಿಯನ್ನು ಹಸ್ತಾಂತರಿಸಿದರು. ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.

ಇದಕ್ಕೆ ಮೊದಲು ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಇದು ಹಿಂದುಳಿದ ವರ್ಗಗಳ ಆಯೋಗ ಸಿದ್ಧ ಮಾಡಿದ ವರದಿಯಾಗಿದೆ. ವೈಜ್ಞಾನಿಕವಾಗಿಯೇ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ವರದಿ ಕುರಿತಾದ ವಿವಾದ ಹಾಗೂ ಆಕ್ಷೇಪಗಳಿಗೆ ನಾನು ಉತ್ತರ ನೀಡುವುದಿಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ವರದಿ ಸ್ವೀಕಾರ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್​​ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಮಾತನಾಡಿ, ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ವರದಿ ಸಿದ್ಧಪಡಿಸಿದ್ದೇವೆ​. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಜಾತಿಗಣತಿ ವರದಿಯನ್ನು ಓದದೇ ಅವೈಜ್ಞಾನಿಕ ಎಂದು ಹೇಗೆ ಹೇಳುತ್ತೀರಿ. ನಾವು ಸಿದ್ಧಪಡಿಸಿದ ಜಾತಿ ಸಮೀಕ್ಷೆ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಜಾತಿ

ಇದನ್ನೂ ಓದಿ : ದೇಶ ಸ್ವತಂತ್ರಗೊಂಡು 76 ವರ್ಷಗಳಾದರೂ ಅಟೆಂಡರ್ ಹುದ್ದೆ ಸಿಗದ ಸಮುದಾಯಗಳಿವೆ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್

ವರದಿಯಲ್ಲಿ ಏನೇನಿದೆ?

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಸಮೀಕ್ಷೆ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ. ಜಾತಿ

ಜಾತಿ ಸಮೀಕ್ಷೆ ವರದಿಯಲ್ಲಿರುವ ಅಂಶಗಳು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ

ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ

ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)

ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)

ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)

ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)

ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024

 

 

Donate Janashakthi Media

Leave a Reply

Your email address will not be published. Required fields are marked *