ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವೆ ಸೀಟು ಹಂಚಿಕೆಯ ಬಗ್ಗೆ ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.
ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ಈಗಾಗಲೇ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಜೊತೆ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸತ್ ಅಧಿವೇಶನ ಕಳೆದ ಬಳಿಕ ಆರೋಗ್ಯ ಸುಧಾರಿಸಿದರೆ ನಾನು, ಇಲ್ಲವೇ ಕುಮಾರಸ್ವಾಮಿ ಅವರು ಮತ್ತೆ ಕೇಂದ್ರ ಗೃಹಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆʼ, ಮೈತ್ರಿಗೆ ಮೊದಲೇ ಪಕ್ಷದ 19 ಶಾಸಕರು ಹಾಗೂ 8 ವಿಧಾನ ಪರಿಷತ್ ಸದಸ್ಯರು, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತುಗಳ ಮಾತುಕತೆ ನಡೆಸಲಾಗಿದೆ. ಆ ಬಳಿಕವೇ ಕುಮಾರಸ್ವಾಮಿ ಅವರು ಗೃಹಮಂತ್ರಿಗಳನ್ನು ಭೇಟಿ ಮಾಡಿದ್ದಾರೆ ಎಂದು ಸ್ಪಪ್ಟಪಡಿಸಿದರು.
ಹಿಂದಿನ ಚುನಾವಣೆಗಳಲ್ಲಿ ಪಕ್ಷವಾರು ಮತಗಳಿಕೆ ಆಧರಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುತ್ತದೆ. ಆದರೆ ಮಂಡ್ಯ ಕ್ಷೇತ್ರವೂ ಸೇರಿದಂತೆ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಟಿಕೆಟ್ ನೀಡಲಾಗುತ್ತದೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಸದ್ಯ ಹಾಸನ ಕ್ಷೇತ್ರ ಜೆಡಿಎಸ್ ಹಾಗೂ ರಾಮನಗರ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಉಳಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿಯ ಸಂಸದರೇ ಇದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: ಎಂಬತ್ತು ವರುಷಕ್ಕಾಗುವ ಮಳೆ ಎರಡು ತಾಸಿನಲ್ಲಿ ಸುರಿದರೆ…!
ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗಾ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಹಂಚಿಕೆ ಪ್ರಕಾರ ಶೇ22ರಷ್ಟು ಮತಗಳು ಸಿಕ್ಕಿವೆ. ಈ ಬಾರಿಗೆ ಯಾರಿಗೆ ಮತ ಹಾಕಬೇಕು ಎಂಬುವುದನ್ನು ಮತದಾರರು ತೀರ್ಮಾನ ಮಾಡುತ್ತಾರೆ ಎಂದರು.
ಕಾಂಗ್ರೆಸ್ 28ರಲ್ಲಿ ಎಲ್ಲ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿದೆ. ಆ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ಒಂದುಗೂಡಿ ಚುನಾವಣೆ ಎದುರಿಸುವ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.
ವಿಡಿಯೋ ನೋಡಿ: ಬಹುಮನಿ ಸುಲ್ತಾನರ ಕಾಲದ ಸುರಂಗ ಬಾವಿ (ವಾಟರ್ ಕರೇಜ್) ಬೀದರ್ನಲ್ಲಿದೆ ಅಚ್ಚರಿಯ ಇತಿಹಾಸ Janashakthi Media