- ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
- 93 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ ಎಚ್‌ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ
- ಮೊದಲ ಪಟ್ಟಿಯಲ್ಲಿ, ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಿಗೆ ಸ್ಥಾನವಿಲ್ಲ.
ಬೆಂಗಳೂರು : ವಿಧಾನಸಭೆ ಚುನಾವಣೆಗೆ ಇನ್ನೂ ಐದಾರು ತಿಂಗಳು ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಯಾಗಿದೆ. 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಮನಗರ ಕ್ಷೇತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೆಚ್.ಡಿ.ರೇವಣ್ಣ ಪವರ್ ಸೆಂಟರ್ ಹಾಸನ ಜಿಲ್ಲೆ ಟಚ್ ಮಾಡದೇ ಇರುವುದು ಅಭ್ಯರ್ಥಿಗಳ ಮೊದಲ ಪಟ್ಟಿಯ ಹೈಲೈಟ್ ಆಗಿದೆ.
ಇದನ್ನೂ ಓದಿ : ದೇವೇಗೌಡ-ಕುಮಾರಸ್ವಾಮಿ ಹೆಸರು ಹೇಳಿದರೆ ಓಟ್ ಬರಲ್ಲ: ಶಾಸಕ ಶಿವಲಿಂಗೇಗೌಡ
ಚುನಾವಣೆಗೆ ಇನ್ನೂ ಐದಾರು ತಿಂಗಳು ಬಾಕಿ ಇರುವಾಗಲೇ ಜೆಡಿಎಸ್ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ಕಚೇರಿ ಜೆ.ಪಿ.ಭನವದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 2023 ವಿಧಾನಸಭಾ ಚುನಾವಣೆಗೆ 93 ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದರು. ಗೊಂದಲ ಮತ್ತು ಭಿನ್ನಾಭಿಪ್ರಾಯ ಹಾಗೂ ಅಸಮಾಧಾನ ಇರುವ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡದೇ ಜಾಣ್ಮೆಯ ನಡೆಯನ್ನು ಜೆಡಿಎಸ್ ಕಾಯ್ದಿರಿಸಿದೆ.
ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್.ಡಿ.ರೇವಣ್ಣ ಪವರ್ ಸೆಂಟರ್ ಹಾಸನ ಜಿಲ್ಲೆಯನ್ನು ಹೆಚ್.ಡಿ.ಕುಮಾರಸ್ವಾಮಿ ಟಚ್ ಮಾಡಿಲ್ಲ. ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಾದ ಶ್ರವಣಬೆಳಗೊಳ, ಬೇಲೂರು, ಅರಸೀಕೆರೆ, ಹೊಳೆನರಸೀಪುರ, ಸಕಲೇಶಪುರ, ಅರಕಲಗೂಡು, ಹಾಸನ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ: ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ