ವಿಶ್ವಾಸಕ್ಕೆ ತೆಗೆದುಕೊಳ್ಳದ ಬಿಜೆಪಿ ಬಗ್ಗೆ ಜೆಡಿಎಸ್ ನಾಯಕರ ಅಸಮಾಧಾನ

ಬೆಂಗಳೂರು: ಇಪ್ಪತ್ತು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ, ಸಹ ಉಸ್ತುವರಿಗಳು ಹಾಗೂ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ವಿಶ್ವಾಸಕ್ಕೆ 

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೆಗೌಡ, ಹಾಗೂ ಮಾಜಿ ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಅತೃಪ್ತಿ ವ್ಯಕ್ತಪಡಿಸಿದರು.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು; ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ನಿರ್ಲಕ್ಷ್ಯ ಮಾಡುತ್ತಿದೆ ಬಿಜೆಪಿ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಬಿಜೆಪಿ. ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡರು.

ಇದನ್ನೂ ಓದಿಮಂಡ್ಯ ಕ್ಷೇತ್ರದ ಟಿಕೆಟ್‌ ಅಂತಿಮಗೊಂಡಿಲ್ಲ, ಚಿಕ್ಕಬಳ್ಳಾಪುರ ಕೇವಲ ಊಹೆಯಷ್ಟೆ – ಸುಮಲತಾ

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. 3% ರಿಂದ 4% ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಹೋಗುತ್ತವೆ. ಆದರೆ ಅವರು ನಮ್ಮನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡರು. ವಿಶ್ವಾಸಕ್ಕೆ 

ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ  ಹೆಚ್.ಡಿ.ರೇವಣ್ಣ, ಮಾಜಿ ಸಚಿವರಾದ ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು,  ಸುರೇಶ್ ಗೌಡ, ಶ್ರೀಕಂಟೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು. ವಿಶ್ವಾಸಕ್ಕೆ 

 

Donate Janashakthi Media

Leave a Reply

Your email address will not be published. Required fields are marked *