ಜೆಡಿಎಸ್ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’: ದಿನೇಶ್ ಗುಂಡೂರಾವ್

ಬೆಂಗಳೂರು: ಎನ್‌ಡಿಎ ಮಿತ್ರಕೂಟದೊಂದಿಗೆ ಜೆಡಿಎಸ್‌ ಸೇರ್ಪಡೆಯಾಗುವ ವರದಿಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಎನ್‌ಡಿಎ ಮಿತ್ರಕೂಟ ವಿಚಾರವಾಗಿ ಟ್ವಿಟ್ ಮಾಡಿರುವ ದಿನೇಶ್ ಗುಂಡೂರಾವ್, ಬಿಜೆಪಿ ‘ಬಿ’ ಟೀಂ ಜೆಡಿಎಸ್‌ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಎಚ್‌ಡಿಕೆ ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ಧಾಂತವಿದೆ? ಜೆಡಿಎಸ್‌ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್‌ಡಿಕೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಕುಮಾರಸ್ವಾಮಿಯವರ ಸುಳ್ಳು ಜಾತ್ಯತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ ಎಂದು ಗುಂಡೂರಾವ್ ಟೀಕಿಸಿದ್ದಾರೆ.

ಇದನ್ನೂ ಓದಿ:ಅಂಗನವಾಡಿಗೆ ಕಳಪೆ ಮೊಟ್ಟೆ ವಿತರಣೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಿ – ಲಕ್ಷ್ಮಿ ಹೆಬ್ಬಾಳ್ಕರ್

ಕುಮಾರಸ್ವಾಮಿ ಎಳ್ಳು ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್‌ನ ಅವನತಿ ಶುರುವಾಗಿದ್ದು, 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ಧಾಂತವೇ ಕಾರಣ ಎಂದು ಗುಂಡೂರಾವ್‌ ಕಿಡಿಕಾರಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಲು ಸೋತಿದ್ದರೂ ಕೆಲವು ಕ್ಷೇತ್ರಗಳಲ್ಲಿ ತನ್ನದೇ ನೆಲೆ ಹೊಂದಿರುವ ಭಾಗವಾಗುವ ಆಲೋಚನೆಯಲ್ಲಿದೆ.

ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ, ಲೋಕಸಭೆ ಚುನಾವಣೆ ಹೊತ್ತಿಗಾದರೂ ಚೇತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಜೆಡಿಎಸ್ ಮೊರೆ ಹೋಗಿದೆ. ಕಾಂಗ್ರೆಸ್ ಜತೆ ಸಂಬಂಧ ಹಳಸಿರುವುದರಿಂದ, ಮತ್ತೆ ತಲೆ ಎತ್ತಬೇಕಾದರೆ ಬಿಜೆಪಿ ಆಸರೆಯೇ ಸೂಕ್ತ ಎಂಬ ತರ್ಕಕ್ಕೆ ಜೆಡಿಎಸ್ ಮುಖಂಡರು ಬಂದಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *