ಬೆಂಗಳೂರು : ಜೆಡಿಎಸ್ ಪಕ್ಷದಿಂದ ಸೂಚಿಸಿದಂತೆ ಸಿಪಿಐ(ಎಂ) ಅಭ್ಯರ್ಥಿಯ ಪರವಾಗಿ ಮತಪ್ರಚಾರವನ್ನು ವಿಧಾನಸಭಾ ಚುನಾವಣೆಯಲ್ಲಿ ನಡೆಸದೇ, ಪಕ್ಷ ವಿರೋಧಿ ನಡೆಯನ್ನು ತೋರಿದ ಎಂ.ಬಾಲಕೃಷ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಈ ಕುರಿತಂತೆ ಇಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್ ಎಂ ರಮೇಶ್ ಗೌಡ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಜೆಡಿಎಸ್ ಪಕ್ಷವು ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗಿದೆ. ಆದರೆ ಜೆಡಿಎಸ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೆ ಆರ್ ಪುರಂ ಕ್ಷೇತ್ರದ ಮುಖಂಡರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವಂತ ಎಂ.ಬಾಲಕೃಷ್ಣ, ವರಿಷ್ಠರ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ವರಿಷ್ಠರ ಆದೇಶ ಧಿಕ್ಕರಿಸಿ, ಜೆಡಿಎಸ್ ಬೆಂಬಲಿತ ಸಿಪಿಐ(ಎಂ) ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸದೇ, ವಿರುದ್ಧವಾಗಿ ಪ್ರಚಾರದಲ್ಲಿ ತೊಡಗಿದ್ದೀರಿ. ನಮ್ಮ ಪಕ್ಷದ ಸಂಘಟನೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಾ ಬಂದಿದ್ದು, ಕೆ ಆರ್ ಪುರಂ ಕ್ಷೇತ್ರದಲ್ಲಿ ನಮ್ಮ ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟು ಮಾಡಿದ್ದೀರಿ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷ ವಿರೋಧಿ ವರ್ತನೆಯಿಂದ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವಂತ ಎಂ ಬಾಲಕೃಷ್ಣ ಆದ ನಿಮ್ಮನ್ನು ಜೆಡಿಎಸ್ ಪಕ್ಷದಿಂದ ಅಮಾನತ್ತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.