ಅಸ್ಸಾಂ ಪ್ರವಾಹ : ಜೀವರಕ್ಷಣೆಗೆಂದು ತಮ್ಮ ನಿವಾಸಗಳನ್ನು ತೊರೆದ ಅಸ್ಸಾಂ ಮಂದಿ

ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದಾಗಿ 20 ಜಿಲ್ಲೆಗಳ 5 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರವಾಹದಿಂದ ತಮ್ಮ ಜೀವ ಉಳಿಸಿಕೊಳ್ಳಲು 5 ಲಕ್ಷಕ್ಕೂ ಅಧಿಕ ಜನರು ತಮ್ಮ ವಾಸಸ್ಥಳಗಳನ್ನ ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ  ಪ್ರವಾಹಕ್ಕೆ ಸಂಬಂದಪಟ್ಟ ಅವಘಡಗಳಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಭೀಕರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಬ್ರಹ್ಮಪುತ್ರ ನದಿಯು ಕಳೆದ ಮೂರು ದಿನಗಳಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು. ಅಸ್ಸಾಂನ ಬಹುತೇಕ ಪ್ರದೇಶಗಳಲ್ಲಿ  ಮುಂದಿನ ಎರಡು ದಿನ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‘ಪ್ರವಾಹದಿಂದ ರಾಜ್ಯದಲ್ಲಿ 5 ಲಕ್ಷ ಮಂದಿ ತೊಂದರೆಗೀಡಾಗಿದ್ದಾರೆ. ಕ್ಷಣ-ಕ್ಷಣಕ್ಕೂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಅಸ್ಸಾಂ ಜಲ ಸಂಪನ್ಮೂಲ ಸಚಿವ ಪಿಜೂಷ್ ಹಜಾರಿಕ ಹೇಳಿದ್ದಾರೆ. ಹೊಜಾಯ್ ಜಿಲ್ಲೆಯ ಪ್ರವಾಹದಲ್ಲಿ ಸಿಲುಕಿದ್ದ 2,000 ಕ್ಕೂ ಹೆಚ್ಚು ಜನರನ್ನು ಭಾರತೀಯ ಸೇನೆ ರಕ್ಷಿಸಿದೆ. ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಆರೋಗ್ಯ ಸಚಿವ ಕೇಶವ್ ಮೊಹಾಂತ ತಿಳಿಸಿದ್ದಾರೆ.

ಪ್ರವಾಹಕ್ಕೆ ತುತ್ತಾಗಿರುವ ದಿಮ ಹಸಾವ್ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಬೀರವಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ರಸ್ತೆ ಹಾಗೂ ರೈಲು ಸಂಚಾರ ಸ್ಥಗಿತಗೊಂಡಿದೆ’ ಎಂದು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಜೊಗೆನ್ ಮೋಹನ್ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *