ನವದೆಹಲಿ: ದೇಶದಲ್ಲಿ ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಗೆ ಸುಮಾರು 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ಇದೀಗ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯ ಸೆ.1 ಶುಕ್ರವಾರ ರಾತ್ರಿ ಬಂಧಿಸಿದೆ. ಕಳೆದ ಮೇ ತಿಂಗಳಿನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ನ್ನು ಆಧರಿಸಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ನರೇಶ್ ಗೋಯಲ್ ಅವರ ವಿರುದ್ಧ ಈಗಾಗಲೇ ಹಲವು ದೂರುಗಳು ಕೇಳಿ ಬಂದಿದ್ದವು ವಂಚನೆ, ಕ್ರಿಮಿನಲ್, ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.
ಒಟ್ಟಾರೆಯಾಗಿ ಇದೀಗ ನರೇಶ್ ಗೋಯಲ್ ಅವರಿಗೆ ಹೊಸ ಕಂಟಕ ಪ್ರಾರಂಭವಾಗಿದ್ದು ಇದರಿಂದ ಮುಂದಾಗುವ ಕಾನೂನು ಸಮಸ್ಯೆಗಳ ಬಗ್ಗೆ ನರೇಶ್‌ರ ಕಾನೂನು ಸಲಹೆಗಾರರು ಕಾನೂನು ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.