ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಇಂದು ಕರಾಳೋತ್ಸವಕ್ಕೆ ಕರೆ ನೀಡಿದೆ. ನಗರದ ಎಪಿಎಂಪಿ ವರ್ತಕರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದು, ಜನಸ್ಪಂದನ ಕಾರ್ಯಕ್ರಮದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ನಗರವನ್ನು ಘೋಷಣೆ ಮಾಡಬೇಕೆಂಬುದು ಹೋರಾಟಗಾರರ ಒತ್ತಾಯ ಮಾಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿಯೂ ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ ಹೋರಾಟಗಾರರು ಎಪಿಎಂಸಿ ಮಾರುಕಟ್ಟೆಯಲ್ಲಿ ಕಪ್ಪು ಬಾವುಟ ಮತ್ತು ಕಪ್ಪು ಬಟ್ಪೆ ಪ್ರದರ್ಶಿಸುವ ಮೂಲಕ ಎಚ್ಚರಿಕೆ ರವಾನಿಸಿದರು.
ಕನ್ನಡ ಜಾಗೃತ ಭವನದಿಂದ ಬೃಹತ್ ಜಾಥ ಪ್ರತಿಭಟನೆ ಮಾಡುವ ಮೂಲಕ ಕರಾಳೋತ್ಸವ ಆಚರಣೆ ಮುಂದಾದರು. ಈ ನಡುವೆ ಪೊಲೀಸ್ ಇಲಾಖೆ ಅವರನ್ನು ತಡೆದು ಪ್ರತಿಭಟನೆ ಅವಕಾಶ ಮಾಡಿಕೊಡಲಿಲ್ಲ ಎಂದರು ವರದಿಯಾಗಿದೆ.