ಕುಡಗುಂಟಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ನೆಪದಲ್ಲಿ ಭಾರೀ ಗೋಲ್ ಮಾಲ್

ಜೆಜೆಎಂ ಕಾಮಗಾರಿ ಕಳಪೆ ಆದರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಜನಪ್ರತಿನಿಧಿಗಳ ಮೌನ

ಯಲಬುರ್ಗಾ: ತಾಲ್ಲೂಕಿನ ಕುಡಗುಂಟಿ ಗ್ರಾಮದಲ್ಲಿ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವ ಜಲಜೀವನ ಮಿಷನ್ ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದ್ದು, ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಎಂದು  ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ  ಜನಪ್ರತಿನಿಧಿಗಳ ಗಮನಕ್ಕೆ ತಂದರು. ಹೀಗಿದ್ದರೂ ಕೂಡ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ, ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶರಣಪ್ಪ ಕುಡಗುಂಟಿ ಆರೋಪಿಸಿದರು.

ತಾಲ್ಲೂಕಿನ ಕುಡಗುಂಟಿ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶರಣಪ್ಪ ಕುಡಗುಂಟಿ ಪ್ರತಿಯೊಂದು ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗು ಗುತ್ತಿಗೆದಾರ ಹಣ ಬಾಕತನದಿಂದಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಬಹುನಿರೀಕ್ಷಿತ ಜಲ ಜೀವನ ಮಿಷನ್ ಕಾಮಗಾರಿ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದಲ್ಲಿ ಅಂದಾಜು ವೆಚ್ಚ ಕಾಮಗಾರಿ ಉಲ್ಲಂಘಿಸಿ ತಮಗೆ ಮನಬಂದಂತೆ ಕಳಪೆ ಕಾಮಗಾರಿ ಮಾಡುವ ಮೂಲಕ ಭಾರಿ ಗೋಲ್ ಮಾಲ್ ಮಾಡಿದ್ದಾರೆ.

ಗುತ್ತಿಗೆದಾರರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೆಂಬಲದಿಂದ ಕಳಪೆ ಕಾಮಗಾರಿ ಮಾಡುತ್ತಿದ್ದು, ನಮ್ಮ ಗ್ರಾಮದಲ್ಲಿ ನಡೆದ ಎಲ್ಲ ಜೆಜೆಎಂ ಕಾಮಗಾರಿಯನ್ನು ಬೇರೆ ಗುತ್ತಿಗೆದಾರರ ಮೂಲಕ ಮರು ಕಾಮಗಾರಿ ಮಾಡಿಸಬೇಕು. ನಮ್ಮ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಕಾಮಗಾರಿ ಗುಣಮಟ್ಟವನ್ನು ಕಾಯ್ದಿರಿಸಬೇಕಾದ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆರೋಪಿಸಿದರು.

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಎಲ್ಲಾ ಕಾಮಗಾರಿಯನ್ನು ತನಿಖೆಗೆ ಒಳಪಡಿಸಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ವರದಿ: ದೇವರಾಜ ದೊಡ್ಡಮನಿ

Donate Janashakthi Media

Leave a Reply

Your email address will not be published. Required fields are marked *