ಜಮ್ಮು ಕಾಶ್ಮೀರ, ಹರಿಯಾಣದ ವಿಧಾನಸಭಾ ಮತದಾನದ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಜಮ್ಮು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 16 ಸ್ಥಾನಗಳು ಎಸ್ಸಿ/ಎಸ್ಟಿಗೆ ಮೀಸಲು ಘೋಷಿಸಲಾಗಿದೆ. ಇದೇ ವೇಳೆ ಹರಿಯಾಣದ 90 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 5ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 18ರಂದು 24 ಕ್ಷೇತ್ರಗಳಿಗೆ, 25ರಂದು 26 ಕ್ಷೇತ್ರಗಳಿಗೆ ಹಾಗೂ ಅಕ್ಟೋಬರ್ 1ರಂದು ಉಳಿದ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಹರಿಯಾಣದಲ್ಲಿ ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ  ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು. ಜಮ್ಮು ಕಾಶ್ಮೀರದ 90 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 87.17 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಇದರಲ್ಲಿ 3.71 ಲಕ್ಷ ಮತದಾರರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ ಎಂದರು.

10 ವರ್ಷಗಳ ನಂತರ ಇದೇ ಮೊದಲ ಬಾರಿ ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿದೆ. ಇತ್ತೀಚೆಗೆ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಇದೀಗ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

Donate Janashakthi Media

Leave a Reply

Your email address will not be published. Required fields are marked *