ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಇಂದು : ಸ್ಥಳದಲ್ಲಿ ಬಿಗಿ ಪೊಲೀಸ್‌ ಭದ್ರತೆ

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಇಂದು ಶುಕ್ರವಾರ ಆರಂಭಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಮಸೀದಿಯೊಳಗೆ ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸುವಂತಿಲ್ಲ: ವಾರಣಾಸಿ ನ್ಯಾಯಾಲಯ

ಸಮೀಕ್ಷೆ ಹಿನ್ನೆಯಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಈಗಾಗಲೇ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

ಸಮೀಕ್ಷೆ ಕಾರ್ಯಕ್ಕೆ ನೆರವು ನೀಡುವಂತೆ ಕೋರಿ ಇಲಾಖೆಯು ವಾರಾಣಸಿ ಜಿಲ್ಲಾಡಳಿತವನ್ನು ಸಂಪರ್ಕಿಸಿದೆ ಎಂದು ಮೂಲಗಳು ಹೇಳಿವೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಮುಸ್ಲಿಂ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್‌ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದ್ದು, ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.

ಅರ್ಜಿ ನಿವಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರೀತಿಂಕರ್‌ ದಿವಾಕರ್‌ ಅವರಿದ್ದ ನ್ಯಾಯಪೀಠ, ಜಿಲ್ಲಾ ನ್ಯಾಯಾಲಯದ ಆದೇಶ ನ್ಯಾಯಬದ್ಧ ಹಾಗೂ ಸಮರ್ಪಕವಾಗಿದ್ದು, ಈ ವಿಷಯದಲ್ಲಿ ಹೈಕೋರ್ಟ್‌ ಮಧ್ಯಪ್ರವೇಶಿಸುವ ಅಗತ್ಯ ಇಲ್ಲ ಎಂಬ ಮಹತ್ವದ ತೀರ್ಪು ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಾರಾಣಸಿ ಜಿಲ್ಲಾಧಿಕಾರಿ ಎಸ್‌.ರಾಜಲಿಂಗಮ್‌, ಎಎಸ್‌ಐ ನಡೆಸಲಿರುವ ವೈಜ್ಞಾನಿಕ ಸಮೀಕ್ಷೆಗೆ ಸಾಧ್ಯವಾದ ಎಲ್ಲ ನೆರವನ್ನು ಜಿಲ್ಲಾಡಳಿತ ನೀಡಲಿದೆ ಎಂದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *