ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ

ನವದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಅವರಿಗೆ 58ನೇ ಜ್ಞಾನಪೀಠ ಪ್ರಶಸ್ತಿ ಶನಿವಾರ ಘೋಷಣೆಯಾಗಿದೆ. ಅವರ ಜೊತೆಗೆ ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಅವರನ್ನು ಹೆಸರಿಸಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಪ್ರಕಟಿಸಿದೆ. 2023ರಲ್ಲಿ ಗೋವಾದ ಬರಹಗಾರ ದಾಮೋದರ್ ಮೌಜೊ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದರು.

ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಕೃತಿಗಳಿಗೆ ಹೆಸರುವಾಸಿಯಾಗಿದ್ದು, ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅವರು ಈ ಹಿಂದೆ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಇಡಿ ಸಮನ್ಸ್ ಪ್ರಕರಣ | ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅರವಿಂದ್ ಕೇಜ್ರಿವಾಲ್

ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕರಾಗಿದ್ದು, ಶಿಕ್ಷಣತಜ್ಞ ಮತ್ತು 100 ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಜ್ಞಾನಪೀಠದ ಆಯ್ಕೆ ಸಮಿತಿ ಹೊರಡಿಸಿದ ಪ್ರಕಟಣೆಯಲ್ಲಿ, “ಸಂಸ್ಕೃತ ಸಾಹಿತಿ ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಗುಲ್ಜಾರ್ ಎಂಬ ಎರಡು ಭಾಷೆಗಳ ಖ್ಯಾತ ಬರಹಗಾರರಿಗೆ (2023 ಕ್ಕೆ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ” ಎಂದು ಹೇಳಿದೆ.

1934 ಆಗಸ್ಟ್ 18ರಂದು ಜನಿಸಿದ ‘ಸಂಪೂರಣ್ ಸಿಂಗ್ ಕಲ್ರಾ’ ಅವರು ‘ಗುಲ್ಜಾರ್‌’ ಎಂಬ ಕಾವ್ಯನಾಮದಿಂದ ಜನಪ್ರಿಯರಾಗಿದ್ದಾರೆ. ಉರ್ದು ಕವಿ, ಗೀತರಚನೆಕಾರ, ಲೇಖಕ, ಚಲನಚಿತ್ರ ಸ್ಕ್ರಿಪ್ಟ್ ಮತ್ತು ಸಂಭಾಷಣೆ ಬರಹಗಾರ ಮತ್ತು ಚಲನಚಿತ್ರ ನಿರ್ದೇಶಕರಾಗಿದ್ದಾರೆ. ಗುಲ್ಜಾರ್ ಅವರು ಗೀತರಚನೆಕಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಸಿದ್ಧ ಸಂಗೀತ ನಿರ್ದೇಶಕ ಎಸ್.ಡಿ. ಬರ್ಮನ್ (ಸಚಿನ್ ದೇವ್ ಬರ್ಮನ್) 1963 ರಲ್ಲಿ ಬಂದಿನಿ ಚಿತ್ರದಲ್ಲಿ ಪ್ರಾರಂಭಿಸಿದರು. ಅವರು ಸಲೀಲ್ ಚೌಧರಿ, ಆರ್.ಡಿ. ಬರ್ಮನ್, ವಿಶಾಲ್ ಭಾರದ್ವಾಜ್ ಮತ್ತು ಎ.ಆರ್. ರೆಹಮಾನ್ ಸೇರಿದಂತೆ ಇತರ ಸಂಗೀತ ನಿರ್ದೇಶಕರೊಂದಿಗೆ ಕೂಡಾ ಕೆಲಸ ಮಾಡಿದ್ದಾರೆ.

ವಿಡಿಯೊ ನೋಡಿ: ಕರ್ನಾಟಕದ 2024-25 ಬಜೆಟ್ ನ ಆಳ ಅಗಲವೇನು? Janashakthi Media

Donate Janashakthi Media

Leave a Reply

Your email address will not be published. Required fields are marked *