ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿ ಚಲೋ ಹೋರಾಟದ ವೇಳೆ ಖಾನೌರಿ ಗಡಿ ಪಾಯಿಂಟ್‌ನಲ್ಲಿ ಮೃತಪಟ್ಟ ಯುವ ರೈತ ಶುಭಕರನ್ ಸಿಂಗ್ ಅವರಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.ರೈತ ಹೋರಾಟ
ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್‌ಗಳತ್ತ ಸಾಗಲು ಯತ್ನಿಸಿದಾಗ ಈ ಘಟನೆ ನಡೆದಿದೆ. ರೈತ ಹೋರಾಟ
ಇದನ್ನೂ ಓದಿ: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹುಕ್ಕಾ ಬಾರ್ ಮತ್ತು ಸಿಗರೇಟ್ ಮಾರಾಟ ನಿಷೇಧದ ಮಸೂದೆ ಅಂಗೀಕಾರ
ಪರಿಹಾರದ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಮಾನ್ ಅವರು, ”ಖಾನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಕುಟುಂಬಕ್ಕೆ ಪಂಜಾಬ್ ಸರಕಾರದಿಂದ 1 ಕೋಟಿ ರೂ. ಆರ್ಥಿಕ ನೆರವು ಹಾಗೂ ಅವರ ತಂಗಿಗೆ ಸರಕಾರಿ ನೌಕರಿ ನೀಡಲಾಗುವುದು” ಎಂದು ಹೇಳಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ ಅವರು ಪಂಜಾಬಿ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ਖਨੌਰੀ ਬਾਰਡਰ ਤੇ ਕਿਸਾਨ ਅੰਦੋਲਨ ਦੌਰਾਨ ਸ਼ਹੀਦ ਹੋਏ ਨੌਜਵਾਨ ਸ਼ੁਭਕਰਨ ਸਿੰਘ ਦੇ ਪਰਿਵਰ ਨੂੰ ਪੰਜਾਬ ਸਰਕਾਰ ਵੱਲੋਂ 1 ਕਰੋੜ ਰੁਪਏ ਦੀ ਆਰਥਿਕ ਸਹਾਇਤਾ ਅਤੇ ਛੋਟੀ ਭੈਣ ਨੂੰ ਸਰਕਾਰੀ ਨੌਕਰੀ ਦਿੱਤੀ ਜਾਵੇਗੀ..ਦੋਸ਼ੀਆਂ ਵਿਰੁੱਧ ਬਣਦੀ ਕਾਨੂੰਨੀ ਕਾਰਵਾਈ ਕੀਤੀ ਜਾਵੇਗੀ..ਫਰਜ਼ ਨਿਭਾ ਰਹੇ ਹਾਂ..
— Bhagwant Mann (@BhagwantMann) February 23, 2024
ಯುವ ರೈತನ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಸುಖಪಾಲ್ ಸಿಂಗ್ ಖೈರಾ ಅವರು ಹರಿಯಾಣ ಪೊಲೀಸರು ಪಂಜಾಬ್ ಪ್ರದೇಶಕ್ಕೆ ನುಗ್ಗುವಾಗ ಮೂಕ ಪ್ರೇಕ್ಷಕರಾಗಿದ್ದಕ್ಕಾಗಿ ಎಎಪಿಯ ಬಲವಂತ್ ಮಾನ್ ಅವರಿಗೆ ನಾಚಿಕೆಯಾಗಬೇಕು ಎಂದು ಹೇಳಿದ್ದರು.
ಅದಾಗ್ಯೂ, ಬುಧವಾರ ನಡೆದ ಘಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ ಎಂದು ಹರಿಯಾಣ ಪೊಲೀಸರು ಪ್ರತಿಪಾದಿಸಿದ್ದರು. “ಇದು ಕೇವಲ ವದಂತಿ. ದಾತಾ ಸಿಂಗ್-ಖನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದರು.
ವಿಡಿಯೊ ನೋಡಿ: ಸೆಕ್ಯೂಲರಿಸಂ ಹಾಗೂ ಸೊಶಿಯಲಿಸಂ ಬೆಸದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ – ಡಾ. ಪ್ರಕಾಶ್