ಮೈಸೂರು: ಕಳೆದ ಹಲವು ದಿನಗಳಿಂದ ಬಿಜೆಪಿ ಬಿಡುತ್ತಾರೆ ಎಂಬ ಆರೋಪವನ್ನು ಹೊತ್ತಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಈಗ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಜಾಮೂನು
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು. ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು. ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಆಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ಸಿಎಂ ಭೇಟಿಯಾದ ಎಸ್. ಟಿ ಸೋಮಶೇಖರ್..!
ನನ್ನನ್ನು ಪಕ್ಷದಿಂದ ಬಿಟ್ಟು ಹೋಗು ಅಂತ ಹೇಳಲು ಈಶ್ವರಪ್ಪ ಯಾರು? ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಈಶ್ವರಪ್ಪ ಏನು ರಾಜ್ಯಾಧ್ಯಕ್ಷನಾ? ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಈಶ್ವರಪ್ಪನನ್ನು ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ ಐದು ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಮೈಸೂರಿನಲ್ಲಿ ಮಾತನಾಡುತ್ತಾ ಅವರು ಹೇಳಿದರು.
“ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿದ್ದಲ್ಲ. ಆರ್ ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವೇ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವೇ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲವೇ? ಕೇವಲ ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತೀರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ” ಎಂದು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಕಡೆಗೆ ವಲಸೆ ಹೋಗುತ್ತಿರುವ ಪ್ರಕ್ರಿಯೆಗೆ ಉತ್ತರಿಸಿದರು.
ನಾನು ಬಿಡಲ್ಲ, ಕಾಂಗ್ರೆಸ್ ಸೇರಲ್ಲ ಎಂದ ಸೋಮಶೇಖರ್
“ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ನಾನು ಮಾನಸಿಕವಾಗಿ ದೈಹಿಕವಾಗಿ ನಾನು ಪಕ್ಷದಲ್ಲೆ ಇದ್ದೇನೆ” ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
“ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ.
ಆದರೆ ಉಳಿದಿವರೇ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೇ ಕ್ಷೇತ್ರದಲ್ಲಿ ಅದ್ದೂರಿಯಾಗಿ ಮಾಡಿದರು. ಇದೆಲ್ಲ ಏನ್ ಅರ್ಥ” ಎಂದು ಸೋಮಶೇಖರ್ ಪ್ರಶ್ನೆ ಮಾಡಿದರು.
“ಬಸವರಾಜು ಬೊಮ್ಮಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಉಳಿಸಿದ್ದು ಯಡಿಯೂರಪ್ಪ ಅವರು. ಯಡಿಯೂರಪ್ಪ ಅವರ ವಿರುದ್ಧ ಐದಾರು ಜನರು ಮಾತನಾಡಿದರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣ” ಎಂದು ಹೇಳುವ ಮೂಲಕ ಯಡಿಯೂರಪ್ಪರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿರುವುದಕ್ಕೆ ಎಸ್.ಟಿ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ
ಇದನ್ನೂ ಓದಿ:ಸರ್ಕಾರ ಮಾರುಕಟ್ಟೆ ವ್ಯವಹಾರಗಳ ಅಧಿನಿಯಮ ಹಿಂಪಡೆಯುವುದಿಲ್ಲ: ಸಚಿವ ಸೋಮಶೇಖರ್
ಬಿಜೆಪಿಗೆ ಬರುವಾಗ ಜಾಮೂನು, ಅಧಿಕಾರ ಮುಗಿದ ಮೇಲೆ ವಿಷ!
“ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ.ನಾನು ಕಾಂಗ್ರೆಸ್ ನಲ್ಲಿದ್ದವನು. ಅವರಾಗಿಯೇ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಪಕ್ಷ ಬಿಡಿಸಲು ಅಂತ ರೆಡಿಯಾಗಿದ್ದಾರೆ ಎಂದು ಎಸ್.ಟಿ. ಸೋಮಶೇಖರ್ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು. ಜಾಮೂನು
ನಾನು ಕ್ಷೇತ್ರಕ್ಕೆ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ. ಜತೆಗೆ ನಾನು ಸಿಎಂ, ಡಿಸಿಎಂ ಅವರನ್ನು ಹೊಗಳುವುದನ್ನು ಸಹಿಸುತ್ತಿಲ್ಲ ಎಂದು ಹೇಳಿದರು. ಜಾಮೂನು
ನಾನು ನನ್ನ ಕಚೇರಿ ಮೂಲಕ ಕಾಂಗ್ರೆಸ್ ಗ್ಯಾರಂಟಿಗಳ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರರ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ ಅದನ್ನು ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವೇ? ಎಂದು ಸೋಮಶೇಖರ್ ಪ್ರಶ್ನಿಸಿದರು.
ಬಿಜೆಪಿ ಬರ ಅಧ್ಯಯನಕ್ಕೂ ಎಸ್‌ಟಿ ಸೋಮಶೇಖರ್ ವಿರೋಧ
ರಾಜ್ಯ ಬಿಜೆಪಿ ಘಟಕ ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ಮಾಡುತ್ತಿರುವುದನ್ನು ಎಸ್.ಟಿ. ಸೋಮಶೇಖರ್ ವಿರೋಧಿಸಿದರು. “ನಿಮ್ಮದೇ ಕೇಂದ್ರ ಸರ್ಕಾರ ಇದೆ. ಅಧಿಕಾರಿಗಳು ಅಧ್ಯಾಯನ ಮಾಡಿ ಹೋಗಿದ್ದಾರೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ. ಅದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ. ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವುದೇ ಪ್ರಯೋಜನ ಇಲ್ಲ” ಎಂದು ಸ್ವ-ಪಕ್ಷದ ವಿರುದ್ಧವೇ ಅವರು ಕಿಡಿ ಕಾರಿದರು. ಶಾಸಕ