ಬೆಂಗಳೂರು: ದಿ ವೀಕ್ ನಿಯತಕಾಲಿಕೆ ಮತ್ತು ಮಲಯಾಳ ಮನೋರಮಾ ದೈನಿಕದ ದೆಹಲಿ ರೆಸಿಡೆಂಟ್ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
68 ವರ್ಷದ ಅವರು ಇತ್ತೀಚೆಗೆ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಕೋಲಾರ ಮೂಲದ ಸಚ್ಚಿದಾನಂದ ಮೂರ್ತಿಯವರು 1982 ರಲ್ಲಿ ದಿ ವೀಕ್ ಸೇರಿದ್ದು, ಬಳಿಕ ಸ್ಥಾನಿಕ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೆಹಲಿಯಲ್ಲಿ 4 ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಎಡಿಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಸಚ್ಚಿದಾನಂದ ಅವರು, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಜಯನಗರ ಟಿ ಬ್ಲಾಕ್‍ನಲ್ಲಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆ 6 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು
ಸಿಎಂ ಸಂತಾಪ: ಮೂರ್ತಿ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಆತ್ಮೀಯ ಗೆಳೆಯ ಮತ್ತು ಹಿತೈಷಿ ಎಂದು ಸ್ಮರಿಸಿದ್ದಾರೆ.
‘ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆಎಸ್ ಸಚ್ಚಿದಾನಂದ ಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ’ ಎಂದು ಸಿದ್ದರಾಮಯ್ಯ ನವರು ಟ್ವೀಟ್ ಮಾಡಿದ್ದಾರೆ.
ಹಿರಿಯ ಪತ್ರಕರ್ತ, 'ಮಲಯಾಳ ಮನೋರಮಾ' ಮತ್ತು 'ದಿ ವೀಕ್' ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ… pic.twitter.com/e8l7ZmXrHH
— Siddaramaiah (@siddaramaiah) October 13, 2023
ವಿಡಿಯೋ ನೋಡಿ: “ಸೈಬರ್ ಕಳ್ಳತನ” ಜಾಗೃತ ಗೀತೆ – ಹಾಡಿದವರು : ಚಂದ್ರಿಕಾ ಗಿರೀಶ್Janashakthi Media