ಉತ್ತರ ಪ್ರದೇಶ: ಹಗಲ ಹೊತ್ತಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಜ್ಯದ ಸೀತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ
ಮೃತ ಪತ್ರಕರ್ತನನ್ನು ರಾಘವೇಂದ್ರ ಬಾಜಪೇಯಿ (35) ಎಂದು ಗುರುತಿಸಲಾಗಿದ್ದೂ, ಹಿಂದಿ ದಿನಪತ್ರಿಕೆಯೊಂದರಲ್ಲಿ ಪ್ರಾದೇಶಿಕ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ರನ್ನು ಹೆಂಪುರ್ ರೈಲ್ವೆ ಕ್ರಾಸಿಂಗ್ ಬಳಿಯ ಮೇಲ್ಸೇತುವೆಯ ಬಳಿ ಗುಂಡಿನ ದಾಳಿ ನಡೆಸಲಾಗಿದೆ.
ಪೊಲೀಸರ ವರದಿಯ ಪ್ರಕಾರ, ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಮೂರು ಗುಂಡುಗಳು ಮೃತ ರಾಘವೇಂದ್ರ ಅವರ ಭುಜ ಮತ್ತು ಎದೆಗೆ ಹೊಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಬಳಿಕ ದಾಳಿಕೋರರು ತಮ್ಮ ಬೈಕ್ ಮೂಲಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಮದುವೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬ್ಯಾನ್: ಕೇರಳ ಹೈಕೋರ್ಟ್
ಕೂಡಲೇ ಸ್ಥಳೀಯರ ಸಹಾಯದಿಂದ ಪೊಲೀಸರು ರಾಘವೇಂದ್ರ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕುಟುಂಬಸ್ಥರ ಹೇಳಿಕೆಯಂತೆ ಕಳೆದ ಕೆಲ ದಿನಗಳಿಂದ ರಾಘವೇಂದ್ರ ಅವರಿಗೆ ಬೆದರಿಕೆ ಫೋನ್ ಕರೆಗಳು ಬರುತ್ತಿದ್ದವು ಎಂದು ಆರೋಪಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ನೋಡಿ: ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕಳ್ಳ ಕಾಕರ ಪಾಲಾಗದಿರಲಿ – ಎಸ್. ವರಲಕ್ಷ್ಮಿ Janashakthi Media