ಜುಲೈ 19 ಹಾಗೂ 22ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಎಸ್‌ ಸುರೇಶ್‌ ಕುಮಾರ್‌

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ದಿನಾಂಕ ನಿಗದಿಯಲ್ಲಿ ಬದಲಾವಣೆಯಾಗಿದ್ದವು. ಇಂದು ನಡೆದ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಂಡ ಬಗ್ಗೆ ಸಭೆಯ ನಂತರ ಕೆಲವು ಮಹತ್ವ ಮಾಹಿತಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಸ್‌ ಸುರೇಶ್‌ ಕುಮಾರ್‌ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಮುಖವಾದ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷೆಯನ್ನು ಜುಲೈ 19 ಹಾಗೂ 22ರಂದು ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ನಿಟ್ಟಿನಲ್ಲಿ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬಗ್ಗೆ ಎಲ್ಲ‌ ಜಿಲ್ಲಾ‌ಧಿಕಾರಿಗಳು, ಮುಖ್ಯ‌ಕಾರ್ಯ‌ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೊ ಸಂವಾದದ ಮೂಲಕ ನಿರ್ದೇಶನಗಳನ್ನು ನೀಡಿದರು.

ಇದನ್ನು ಓದಿ: ಶಾಲೆಗಳನ್ನು ಆರಂಭಿಸುವ ಬಗ್ಗೆ ಸೋಮವಾರ ನಿರ್ಧಾರ: ಸಚಿವ ಸುರೇಶ್ ಕುಮಾರ್

ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಸಚಿವ ಎಸ್‌ ಸುರೇಶ್ ಕುಮಾರ್ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎರಡು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್‌ ಸುತ್ತ ಸೆಕ್ಷನ್‌ 144 ಜಾರಿಯಲ್ಲಿರಲಿದೆ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ದತೆಯ ಕೆಲವು ಪ್ರಮುಖ ಅಂಶಗಳು

ಜುಲೈ 19ರಂದು ಗಣಿತ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ, ಜುಲೈ 22ರಂದು ಕನ್ನಡ, ಇಂಗ್ಲೀಷ್, ಹಿಂದಿ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ 1.30ವರೆಗೆ ನಡೆಯಲಿದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇದೆ.

ಕಳೆದ ಬಾರಿ 2020ನೇ ಸಾಲಿನ ಪರೀಕ್ಷೆಯನ್ನು ಆರು ದಿನಗಳು ನಡೆಸಲಾಗಿತ್ತು. ಆಗಿನ ಪರಿಸ್ಥಿತಿ ತಕ್ಕಮಟ್ಟಿಗೆ ಉತ್ತಮವಾಗಿದ್ದವು, ಆದರೆ ಈ ಬಾರಿ ವಿಶೇಷ ಪರಿಸ್ಥಿತಿಯಲ್ಲಿ ಎದುರಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಮಕ್ಕಳಲ್ಲಿ ಮುಂದಿನ ಶಿಕ್ಷಣದ ಬಗ್ಗೆ ಆತ್ಮವಿಶ್ವಾಸ ಮೂಡಿಸಲು ಈ ಪರೀಕ್ಷೆ ನಡೆಸಲಾಗುತ್ತಿದೆ. ಶಾಲೆಯ ಮುಖ್ಯಸ್ಥರು ಜೂನ್ 30 ರಂದು ಹಾಲ್ ಟಿಕೆಟ್ ವಿತರಣೆ ಮಾಡಲಿದ್ದಾರೆ. ಬಹು ಆಯ್ಕೆ ಪ್ರಶ್ನೆಗಳ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. ಓಎಂಆರ್‌ ಪತ್ರಿಕೆಯಲ್ಲಿ ಉತ್ತರಿಸಬೇಕು.

ಇದನ್ನು ಓದಿ: ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ತಜ್ಞರ ಸಮಿತಿ ಶಿಫಾರಸ್ಸು

ಪರೀಕ್ಷಾ ಕೇಂದ್ರದ ಬಳಿ ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 8:30ಕ್ಕೆ ಹಾಜರಬೇಕು. ಪರೀಕ್ಷಾ ಕೆಂದ್ರಗಳ ಸುತ್ತಮುತ್ತ ಜನಜಂಗುಳಿಯಾಗದಂತೆ ಹಾಗೂ ವಾಹನದಿಂದ ಟ್ರಾಫಿಕ್ ಜಾಮ್‌ ಆಗದಂತೆ ಕ್ರಮ ತೆಗೆದುಕೊಳ್ಳಲಾಗುವುದು.

ನಿಗದಿತ ಪರೀಕ್ಷಾ ಕೇಂದ್ರದ ವ್ಯಾಪ್ತಿಯಿಂದ ದೂರ ಉಳಿದುಕೊಂಡಿರುವ ಮಕ್ಕಳು ಈ ಬಾರಿ ತಮ್ಮ ಮನೆ ಬಳಿ ಇರುವ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಮಕ್ಕಳ ಪರೀಕ್ಷಾ ಕೇಂದ್ರಗಳು ಸುರಕ್ಷಾಗಳಾಗಿಯೂ ಕಾರ್ಯನಿರ್ವಹಿಸಲಿದೆ. ಎಲ್ಲಾ‌ ಮಕ್ಕಳು ಕಡ್ಡಾಯವಾಗಿ ‌ಉತ್ತಮ ಗುಣಮಟ್ಟದ ಮಾಸ್ಕ್ ಧರಿಸಬೇಕು. ಉಚಿತವಾಗಿ ಎನ್ 95 ಮಾಸ್ಕ್ ಕೊಡಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೊಠಡಿ ಇರಲಿದೆ.

​ಪಾಸಿಟಿವ್ ಬಂದ ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿದೆ. ಕೆಮ್ಮು, ಜ್ವರ ಇದ್ರೆ ಅಂತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.

8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗುತ್ತಿದ್ದಾರೆ, 73 ಸಾವಿರದ 660 ಕೇಂದ್ರಗಳಲ್ಲಿ ನಡೆಯಲಿದೆ. ಕಳೆದ ಬಾರಿ 8 ಲಕ್ಷದ 46 ಸಾವಿರ ಮಕ್ಕಳು ಪರೀಕ್ಷೆಯನ್ನು ಬರೆದಿದ್ದರು.

ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಪ್ರಶ್ನೆ ಪತ್ರಿಕೆ ಹಾಗು ಉತ್ತರ ಪತ್ರಿಕೆ ತೆಗೆದುಕೊಂಡು ಹೋಗಲು ಪೊಲೀಸ್‌ ಇಲಾಖೆಯ ಸಹಾಯದೊಂದಿಗೆ ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

Donate Janashakthi Media

Leave a Reply

Your email address will not be published. Required fields are marked *