ಬೆಂಗಳೂರು: ವಿಧಾನ ಪರಿಷತ್ತಿನ ಏಳು ಸದಸ್ಯರಾದ ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್‌ನ ಆರ್‌ಬಿ ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವಧಿ 2022 ಜೂನ್ 14ಕ್ಕೆ ಮುಕ್ತಾಯವಾಗಲಿದ್ದು. ಚುನಾವಣಾ ದಿನಾಂಕ ಘೋಷಣೆಯಾಗಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು (ಮೇ 10) ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 3ರಂದು ಮತದಾನ ನಿಗದಿಯಾಗಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮೇ 25 ಪರಿಶೀಲನೆ ನಡೆಯಲಿದೆ. ಮೇ 27 ನಾಮಪತ್ರ ಹಿಂಪಡೆಯಲು ಕೊನೆಯ ದಿನ.
ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬ ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಜೂನ್ 3 ರಂದು 9ರಿಂದ ಸಂಜೆ 4ರವರೆಗೂ ಮತದಾನ ನಡೆಯಲಿದ್ದು, ಅದೇ ದಿನದ ಸಂಜೆ ಮತ ಎಣಿಕೆಯಾಗಿ ಫಲಿತಾಂಶ ಹೊರಬೀಳಲಿದೆ.