ಬೆಂಗಳೂರು: ಏಪ್ರಿಲ್ 22 ರಿಂದ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಒಂದೊಂದು ವಿಷಯದ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮೌಲ್ಯಮಾಪನ ಶುರುವಾಗುತ್ತದೆ. ಜೂನ್ ಕೊನೆ ವಾರದಲ್ಲಿ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಸಿದ್ಧತೆಗಳು ನಡೆಯುತ್ತಿದ್ದು ಫಲಿತಾಂಶ ಬರುವುದು ಪಕ್ಕಾ ಎಂದು ಮೂಲಗಳು ತಿಳಿಸಿವೆ.
ಮೇ 20 ರಿಂದ ಜೂನ್ 15ರೊಳಗೆ ಮೌಲ್ಯಮಾಪನ ಮುಗಿಸಿ ಜೂನ್ ಕೊನೆ ವಾರದೊಳಗೆ ಫಲಿತಾಂಶ ಪ್ರಕಟ ಮಾಡಬೇಕೆಂದು ಕಾಲಾವಧಿಯನ್ನು ನಿಗದಿಮಾಡಲಾಗಿದೆ. ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು. ಹಾಗಾಗಿ ಆದಷ್ಟು ಬೇಗ ಫಲಿತಾಂಶ ನೀಡುತ್ತೇನೆ ಎಂದು ಪಿಯು ಬೋರ್ಡ್ ನಿರ್ದೇಶಕ ಆರ್.ರಾಮಚಂದ್ರನ್ ಅವರು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಪರೀಕ್ಷೆ ನಡೆಯದೆ ಫಲಿತಾಂಶದ ಸಮಯದಲ್ಲಿ ಏರುಪೇರಾಗಿತ್ತು. ಈಗ ನಿಗದಿತ ಅವಧಿಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಫಲಿತಾಂಶವನ್ನೂ ನಿಗದಿತ ಅವಧಿಯಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.