ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಜುಲೈ 2 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನು ನೇಮಕ ಮಾಡಿ ಅದೇಶ ನೀಡಲಾಗಿದೆ.

ಕೇಂದ್ರ ಕಾನೂನು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್‌ ಆದೇಶ ಹೊರಡಿಸಿದ್ದು,  ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತಮ್ಮ 62ನೇ ಹುಟ್ಟುಹಬ್ಬದ ಮುನ್ನಾದಿನ ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು 65 ವರ್ಷ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ, ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗಲಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *