ಬೆಂಗಳೂರು: ಕ್ರಿಯಾ ಮಾಧ್ಯಮ ಪ್ರಕಟಿಸಿರುವ ಮದ್ರಾಸ್ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ರವರ ಲಿಸನ್ ಟು ಮೈ ಕೇಸ್ ಕೃತಿಯ ಕನ್ನಡ ಅನುವಾದ ನನ್ನ ದೂರು ಕೇಳಿ – ಮಹಿಳೆಯರು ನ್ಯಾಯಾಲಯದ ಕದ ತಟ್ಟಿದಾಗ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನ್ಯಾಯಮೂರ್ತಿಯಾಗಿ ತನ್ನೆದುರಿಗೆ ಬಂದ ಪ್ರಕರಣಗಳು, ಅಲ್ಲಿ ಸಿಕ್ಕ ಅನುಭವಗಳನ್ನು ದಾಖಲಿಸಿದ ನ್ಯಾಯಮೂರ್ತಿ ಕೆ.ಚಂದ್ರು ಅವರ ಮೂಲ ಕೃತಿಯನ್ನು ಸತೀಶ್. ಜಿ.ಟಿ ಮತ್ತು ಪಿ.ಭಾರತಿ ದೇವಿ ಕನ್ನಡಕ್ಕೆ ಅನುವಾದಿಸಿದ್ದಾರೆ.
ನನ್ನ ದೂರು ಕೇಳಿ-ಮಹಿಳೆಯರು ನ್ಯಾಯಾಲಯದ ಕದ ತಟ್ಟಿದಾಗ ಪುಸ್ತಕವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ ದಾಸ್ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಮಹಿಳೆಯರಿಗೆ ನ್ಯಾಯ ಮತ್ತು ನಮ್ಮ ನ್ಯಾಯ ವ್ಯವಸ್ಥೆ ವಿಷಯದ ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕದ ಹಿರಿಯ ನ್ಯಾಯವಾದಿಗಳಾದ ಶ್ರೀಮತಿ ಹೇಮಲತಾ ಮಹಿಷಿ ಅವರು ವಿಷಯ ಮಂಡನೆ ಮಾಡಲಿದ್ದು, ವಿವಿಧ ಮಹಿಳಾ ಹಕ್ಕುಗಳ ಹೋರಾಟಗಾರರು, ಮತ್ತು ವಕೀಲರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಖಿಲ ಭಾರತ ವಕೀಲಕ ಒಕ್ಕೂಟ (ಎ.ಐ.ಎಲ್.ಯು.), ಎ.ಐ.ಎಲ್.ಏ.ಜೆ.ಗಳ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಜುಲೈ 23-07-2022, ಶನಿವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆ.ಆರ್.ವೃತ್ತದ ಬಳಿ ಇರುವ ಯು.ವಿ.ಸಿ.ಇ. ಅಲ್ಯುಮ್ನಿ ಸಭಾಂಗಣದಲ್ಲಿ ನಡೆಯಲಿದೆ.