ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ಪಕ್ಷದ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು, ಚೆನ್ನೈನ ಸೆಂಬಿಯಂನಲ್ಲಿರುವ ಅವರ ನಿವಾಸದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
6 ಮಂದಿ ಇದ್ದ ಗ್ಯಾಂಗ್ ಸೇಂಬಿಯಂ ಬಳಿ ಆರ್ಮ್ ಸ್ಟ್ರಾಂಗ್ ಅವರನ್ನು ಕೊಲೆ ಮಾಡಿದೆ ಎಂದು ತಿಳಿದುಬಂದಿದೆ. ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತಾದರೂ, ಆಸ್ಪತ್ರೆಗೆ ಕರೆತರುವ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.ಹತ್ಯೆ
ಮರಣೋತ್ತರ ಪರೀಕ್ಷೆಗಾಗಿ ಕೆ ಆರ್ಮ್‌ಸ್ಟ್ರಾಂಗ್ ಅವರ ಮೃತದೇಹವನ್ನು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಶಂಕಿತರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಗ್ರೇಟರ್ ಚೆನ್ನೈ ಪೊಲೀಸರು ಕನಿಷ್ಠ 10 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರ್ಮ್‌ಸ್ಟ್ರಾಂಗ್ ಬಳಿಯಿದ್ದ ಇತರ ಇಬ್ಬರು ವ್ಯಕ್ತಿಗಳಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ : 55 ವರ್ಷದ ಶಿಕ್ಷಕಿಯಿಂದ ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ
ಪೊಲೀಸರ ಪ್ರಕಾರ, ಆರ್ಮ್‌ಸ್ಟ್ರಾಂಗ್ ತನ್ನ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಸೆಂಬಿಯಮ್‌ನ ವೇಣುಗೋಪಾಲ್ ಸ್ಟ್ರೀಟ್‌ನಲ್ಲಿ ಸುಮಾರು 7 ಗಂಟೆಗೆ ಕಟ್ಟಡದ ನಿರ್ಮಾಣ ಕಾರ್ಯವನ್ನು ನೋಡಿಕೊಳ್ಳುತ್ತಿದ್ದರು. ಈ ವೇಳೆ ಆರು ಮಂದಿಯ ತಂಡ ಎರಡು ಬೈಕ್‌ಗಳಲ್ಲಿ ಬಂದು ಆತನನ್ನು ಸುತ್ತುವರಿದು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದರು, ರಕ್ತದ ಮಡುವಿನಲ್ಲಿ ಬಿದ್ದ ಆರ್ಮ್‌ಸ್ಟ್ರಾಂಗ್ ಸಾವನ್ನಪ್ಪಿದ್ದಾರೆ.
ಸೇಂಬಿಯಂ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಅಪರಾಧ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅವರು ಆರ್ಮ್‌ಸ್ಟ್ರಾಂಗ್ ಅವರ ಮೊಬೈಲ್ ಫೋನ್ ದಾಖಲೆಗಳನ್ನು ಸಹ ಪರಿಶೀಲಿಸುತ್ತಿದ್ದಾರೆ.
ಇದನ್ನು ನೋಡಿ : ಮಡಿಕೇರಿ : ಅಬ್ಬಿ ಜಲಪಾತ ವೀಕ್ಷಣೆಯ ಕಬ್ಬಿಣದ ವಾಚ್ ಟವರ್ ನಲ್ಲಿ ಬಿರುಕುJanashakthi Media