ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧ – ಸಚಿವ ಗೋಪಾಲಯ್ಯ

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾಗಿ ಪಕ್ಷದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಇವತ್ತು ಕ್ಯಾಬಿನೆಟ್ ಸಭೆ ಇದೆ. ನಾವೆಲ್ಲ ಸಿಎಂ ಜೊತೆ ಮಾತನಾಡುತ್ತೇವೆ.ನಾವೆಲ್ಲ ಅವರ ಜೊತೆಗಿದ್ದೇವೆ ಎಂದರು.

ಇನ್ನು ಇದೇ ಸಂದರ್ಭದಲ್ಲಿ ಹೈಕಮಾಂಡ್ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಹೈಕಮಾಂಡ್ ಭೇಟಿ ಮಾಡಲು ನಾವೆಲ್ಲ ಒಟ್ಟಿಗೆ ಕೂತು ಚರ್ಚೆ ಮಾಡಿ ತಿರ್ಮಾನ ಮಾಡುತ್ತೇವೆ ಎಂದರು.

ಯಡಿಯೂರಪ್ಪ ನಮ್ಮ ಧ್ವನಿಯಾಗಿದ್ದಾರೆ. ನಾವೆಲ್ಲ ವಲಸಿಗರಲ್ಲ ಬದಲಾಗಿ ಬಿಜೆಪಿಯವರು. ಹೈಕಮಾಂಡ್ ‌ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ. ಕ್ಯಾಬಿನೆಟ್‌ ಸಭೆಯಲ್ಲಿ ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ : ರಾಜೀನಾಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ ?!

ಇದೇ ವೇಳೆ ಸಚಿವ ನಾರಾಯಣಗೌಡ ಅವರು ಪ್ರತಿಕ್ರಿಯೆ ನೀಡಿದ್ದು,  ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಯಾವ ತರಹದ ಅಡಚಣೆ ಇಲ್ಲ.  ಸಿಎಂ ಆಗಿದ್ದುಕೊಂಡೆ ಅವರು ಪಕ್ಷದ ಕೆಲಸ ಮಾಡಲಿದ್ದಾರೆ. ಯಡಿಯೂರಪ್ಪ ನಮ್ಮ ಹೈಕಮಾಂಡ್‌  ಅವರೇ ಸಿಎಂ ಆಗಿ ಮುಂದುವರೆಯಬೇಕು ಎಂಬುದು ನನ್ನ ಆಸೆ.  ಅಗತ್ಯ ಬಿದ್ದರೆ ದೆಹಲಿಗೆ ಹೋಗಿ ಬರಲು ಸಿದ್ದ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಜುಲೈ 26 ರಂದು ಮಹತ್ವದ ಬೆಳವಣಿಗೆಗಳು ನಡೆಯಲಿದೆ. ಜುಲೈ 25 ರಂದು ಈ ಕುರಿತಾಗಿ ಹೈಕಮಾಂಡ್ ಸೂಚನೆ ನೀಡಲಿದೆ. ಈ ಸೂಚನೆಯನ್ನು ಪಾಲನೆ ಮಾಡಲು ಸಿದ್ಧ ಎಂದು ಈಗಾಗಲೇ ಯಡಿಯೂರಪ್ಪ ತಿಳಿಸಿದ್ದಾರೆ. ಆದರೆ ಹೈಕಮಾಂಡ್‌ನಿಂದ ಏನು ಸೂಚನೆ ಬರಲಿದೆ ಎಂಬುವುದು ಮಾತ್ರ ಇನ್ನೂ ಸ್ಪಷ್ಟಗೊಂಡಿಲ್ಲ. ಆದರೂ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ವಲಸಿಗರಲ್ಲಿ ಆತಂಕ ಸೃಷ್ಟಿಸಿದೆ ಎಂಬುವುದಂತೂ ಸ್ಪಷ್ಟ. ಈ ನಿಟ್ಟಿನಲ್ಲಿ ಎಲ್ಲರ ಚಿತ್ತ ಹೈಕಮಾಂಡ್‌ನತ್ತ ನೆಟ್ಟಿದೆ.

Donate Janashakthi Media

Leave a Reply

Your email address will not be published. Required fields are marked *