ಸಾಹಿತಿ ಭಗವಾನ್‌ ಮುಖಕ್ಕೆ ಮಸಿ ಬಳಿದ ಪ್ರಕರಣ: ಮೀರಾ ರಾಘವೇಂದ್ರ ವಕೀಲಿಕೆಗೆ ತಡೆ

ಬೆಂಗಳೂರು: ಸಾಹಿತಿ ಕೆ.ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ವಕೀಲರ ಪರಿಷತ್‌ ಆದೇಶ ನೀಡಿದ್ದು, ವಕೀಲೆ ಮೀರಾ ರಾಘವೇಂದ್ರ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ನಡೆಸುವಂತಿಲ್ಲ ಎಂದು ಹೇಳಿದೆ.

ಪ್ರಗತಿಪರ ಚಿಂತಕ ಮತ್ತು ಸಾಹಿತಿ ಕೆ.ಎಸ್.ಭಗವಾನ್ ದಾಖಲಿಸಿದ ದೂರನ್ನು ರಾಜ್ಯ ವಕೀಲರ ಪರಿಷತ್ತಿನ, ‘ಶಿಸ್ತುಪಾಲನಾ ಸಮಿತಿ’ ಅಧ್ಯಕ್ಷ ಎಸ್‌.ಮಹೇಶ್ ಮತ್ತು ಪರಿಷತ್ ಸದಸ್ಯ ಎಸ್.ಹರೀಶ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ, ವಕೀಲೆ ಮೀರಾ ವೃತ್ತಿ ದುರ್ನಡತೆ ತೋರಿದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ.

ಸಮವಸ್ತ್ರ ಧಾರಿಣಿಯಾಗಿ ಮೀರಾ ಅವರು ಕ್ರಿಮಿನಲ್ ಪ್ರಕರಣವೊಂದರ ಆರೋಪಿಯಾದ ಕೆ. ಎಸ್. ಭಗವಾನ್ ಅವರಿಗೆ ನ್ಯಾಯಾಲಯ ಆವರಣದಲ್ಲಿ ಮುಖಕ್ಕೆ ಮಸಿ ಬಳಿಯುವ ಮೂಲಕ ದುರ್ನಡತೆ ತೋರಿದ್ದಾರೆ. ವೃತ್ತಿಗೆ ಬದ್ಧರಾಗಿರದ ಶಿಷ್ಟಾಚಾರಗಳಿಗೆ ಅಪಮಾನ ಉಂಟು ಮಾಡಿದ್ದಾರೆ. ಹೀಗಾಗಿ, ಅವರು ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ನಡೆಸಬಾರದು ಮತ್ತು ವಕಾಲತ್ತು ಸಲ್ಲಿಸಬಾರದು. ಅಲ್ಲಿಯವರೆಗೆ ಅವರ ಸನ್ನದನ್ನು ಅಮಾನತಿನಲ್ಲಿ ಇರಿಸಲಾಗಿದೆ’ ಎಂದು ಸಮಿತಿಯು ತನ್ನ ಆದೇಶದಲ್ಲಿ ವಿವರಿಸಿದೆ.

ಇದನ್ನೂ ಓದಿ : ತನಿಖೆ ವೇಳೆ ಮಹಿಳೆಯನ್ನು ಬೆತ್ತಲೆಗೊಳಿಸಿ, 25 ಲಕ್ಷ ರೂ.ಗೆ ಕೊಡುವಂತೆ ಬೇಡಿಕೆ ಇಟ್ಟ ಸಿಸಿಬಿ ಪೊಲೀಸರು: ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪ್ರಕರಣ ಈಗ ಸಿಸಿಬಿ ಕೈಗೆ

ಸಾಹಿತಿ ಕೆ ಎಸ್ ಭಗವಾನ್ ಅವರು ತಮ್ಮ ರಾಮ ಮಂದಿರ ಏಕೆ ಬೇಡ ಎಂಬ ಪುಸ್ತಕದಲ್ಲಿ ಶ್ರೀರಾಮನನ್ನು ಹೀಯಾಳಿಸಿದ್ದಾರ. ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿರುವ ವಕೀಲೆ ಮೀರಾ ರಾಘವೇಂದ್ರ ಅವರಯ ಕೆ ಎಸ್ ಭಗವಾನ್ ವಿರುದ್ಧ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಈ ಪ್ರಕಣಕ್ಕೆ ಸಂಬಂಧಿಸಿದಂತೆ 2021ರ ಫೆಬ್ರವರಿ 4ರಂದು ನ್ಯಾಯಾಲಯಕ್ಕೆ ಷರತ್ತುಬದ್ಧ ಜಾಮೀನು ಪಡೆದು ಹೊರಬರುತ್ತಿದ್ದ ಕೆ ಎಸ್ ಭಗವಾನ್‌ ಅವರ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದು, ಎಂ ಎಂ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಅವರಂತೆ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿಂತೆ ತಮ್ಮ ಮುಖಕ್ಕೆ ಮಸಿ ಬಳಿದಿದ್ದ ನಡವಳಿಕೆಯನ್ನು ಆಕ್ಷೇಪಿಸಿ ಭಗವಾನ್ ಅವರು ರಾಜ್ಯ ವಕೀಲರ ಪರಿಷತ್‌ನಲ್ಲಿ ಮೀರಾ ವಿರುದ್ಧ ದೂರು ದಾಖಲಿಸಿದ್ದರು.

ಇದನ್ನೂ ನೋಡಿ : ವಿಕ್ರಂಗೌಡ ಶೂಟೌಟ್ ಪ್ರಕರಣ – ನ್ಯಾಯಾಂಗ ತನಿಖೆಗೆ ಒಪ್ಪಿಸಿ – ಮಾಜಿ ನಕ್ಸಲರ ಆಗ್ರಹJanashakthi Media

Donate Janashakthi Media

Leave a Reply

Your email address will not be published. Required fields are marked *