ಗುಂಡಿಟ್ಟು ಕೊಲ್ಲಿ ಹೇಳಿಕೆ : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ : ದೇಶ ಇಬ್ಭಾಗ ಎನ್ನುವವರಿಗೆ ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಗುಂಡಿಟ್ಟು

ಈ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಈಶ್ವರಪ್ಪ ಅವರ ಮೇಲೆ FIR ಆಗಿದೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಮೋದಿಯವರು ಯೋಚಿಸಬೇಕು. ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳನ್ನು ಯಾರು ನೀಡಬಾರದು ಎಂದರು. ಗುಂಡಿಟ್ಟು

ಉಗ್ರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧವೂ ಎಫ್‌ಐಆರ್ ಆಗಿದೆ. ‘ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ , ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಇದನ್ನೂ ಓದಿಬಾಬರಿ ಮಸೀದಿ ಧ್ವಂಸದ ವೇಳೆ ಪ್ರಧಾನಿಯಾಗಿದ್ದ ಕಾಂಗ್ರೆಸ್‌ನ ಪಿ. ವಿ. ನರಸಿಂಹ ರಾವ್‌ಗೆ ಭಾರತ ರತ್ನ ಘೋಷಣೆ

ಘಟನೆಯ ಹಿನ್ನೆಲೆ : ದಾವಣಗೆರೆ ನಗರದಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ‘ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂಬ ಹೇಳಿಕೆ ಕೆಎಸ್​.ಈಶ್ವರಪ್ಪನೀಡಿದ್ದರು. ಸಂಸದ ಡಿ.ಕೆ. ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ಅವರು ರಾಷ್ಟ್ರದ್ರೋಹಿಗಳು, ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿ ಮಾಡಿ ಎಂದು ಪ್ರಧಾನಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದರು. ಗುಂಡಿಟ್ಟು

ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ” 24 ಗಂಟೆಯೊಳಗೆ ಕ್ಷಮೆ ಕೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕಜಾಲತಾಣದಲ್ಲೂ ಈಶ್ವರಪ್ಪನವರ ಈ ಹೇಳಿಕೆ ಸಾಕಷ್ಟು ವಿರೋಧವನ್ನು ಪಡೆದಿತ್ತು. ಸೌಹಾರ್ದತೆಗೆ ಧಕ್ಕೆ ತರುವ ಹಾಗೂ ಕೋಮುಗಲಭೆಗಳನ್ನು ಸೃಷ್ಟಿಸುವ ಹೇಳಿಕೆಗಳ ಮೂಲಕ ಬಿಜೆಪಿಯವರು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ದ ತಕ್ಷಣದ ಕ್ರಮ ಅಗತ್ಯ ಎಂದು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.  ಗುಂಡಿಟ್ಟು

(ಎಫ್‌ಐಆರ್‌ ಕುರಿತು ದಾವಣಗೆರೆ ಎಸ್‌ಪಿ ಹಾಗೂ ಸಚಿವ ಜಿ. ಪರಮೇಶ್ವರ್‌ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ. ಯಾವ ಯಾವ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾದ ತಕ್ಷಣ ಸುದ್ದಿಯನ್ನು ಅಪ್ಡೇಟ್‌ ಮಾಡಲಾಗುವುದು)

ಈ ವಿಡಿಯೋ ನೋಡಿರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ನೆನಪು : ಫೆಬ್ರವರಿ 10 ರಂದು ಸಮಾವೇಶJanashakthi Media

 

Donate Janashakthi Media

Leave a Reply

Your email address will not be published. Required fields are marked *