ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಶುಕ್ರವಾರದಂದು ಶಿವಮೊಗ್ಗದಿಂದ ಬೆಂಗಳೂರಿಗೆ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಈಶ್ವರಪ್ಪ ರಾಜೀನಾಮೆ ಪತ್ರ ಆಧರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರವನ್ನು ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.