ಬೆಂಗಳೂರು : ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ- ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಈಶ್ವರಪ್ಪ ತಿಳಿಸಿದ್ದಾರೆ.