ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ. ಬಿಸಿಯೂಟ
ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿಯು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು.
ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನವೆಂಬರ್ 16ರಂದು ಈ ದುರಂತ ನಡೆದಿತ್ತು. ವಿದ್ಯಾರ್ಥಿನಿ ಸಾಂಬಾರ್ ಪಾತ್ರೆಗೆ ಬಿದ್ದ ಹಿನ್ನೆಲೆ ಆಕೆಗೆ ಗಂಭೀರವಾದ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಮೊದಲಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಕಲಬುರಗಿ| ಬಿಸಿಯೂಟ ಸಾಂಬಾರಿಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ
ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸುರಕ್ಷಿತ ಬಿಸಿಯೂಟ ವಿತರಣೆ ಮಾಡದಿರುವುದು ಗಂಭೀರ ಕರ್ತವ್ಯ ಲೋಪಕ್ಕೆ ಪುಟ್ಟ ಜೀವ ಬಲಿಯಾಗಿದೆ.
ಭಾನುವಾರ ನಸುಕಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖ್ಯಸ್ಥರನ್ನು ಅಮಾನತು ಮಾಡಲಾಗಿದೆ.
ವಿಡಿಯೋ ನೋಡಿ: ದಲಿತರ ಶೃಂಗಸಭೆ : ಸನಾತನಿ ಸರ್ಕಾರದಿಂದ ದಲಿತರ ಮೇಲೆ ನಿರಂತರ ದರ್ಜನ್ಯ – ಜನಾಕ್ರೋಶ Janashakthi Media