ಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 20ಕ್ಕೂ ಹೆಚ್ಚು ಮಂದಿಯ ಬಂಧನ

ಕಲಬುರಗಿ: ಇಂದು ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದರೆ, ಇತ್ತ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕಲಬುರಗಿ ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಧ್ವಜಾರೋಹಣ ಮಾಡಲು ಯತ್ನಿಸಿದ  ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂಎಸ್ ಪಾಟೀಲ್ ಸೇರಿದಂತೆ ಹಲವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ  ಎಂದು ಡಿಸಿಪಿ ಎ.ಶ್ರೀನಿವಾಸಲು ತಿಳಿಸಿದ್ದಾರೆ.

ಸಮಿತಿ ಅಧ್ಯಕ್ಷ ಎಂ.ಎಸ್‌.ಪಾಟೀಲ್‌, ಮುಖಂಡರಾದ ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ, ಲಕ್ಷ್ಮೀಕಾಂತ ಸ್ಚಾದಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ : ಮರೆಮಾಚಿದ ಸತ್ಯಗಳು

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿಧೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರೆದಿದೆ ಎಂದು ಅವರು ಆರೋಪಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಟ್ಟ ಹಣ ಪಕ್ಕದ ಜಿಲ್ಲೆಗಳಿಗೆ ಬಳಕೆ ಮಾಡಲಾಗುತ್ತಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ: ಕರ್ನಾಟಕ ರಾಜ್ಯೋತ್ಸವ : ಜನರ ಬದುಕಿನ‌ ಪ್ರಶ್ನೆಗಳು ಯಾಕಿಲ್ಲ? – ಜಿ.ಎನ್ ನಾಗರಾಜ ಅವರ ವಿಶ್ಲೇಷಣೆ Janashakthi Media

Donate Janashakthi Media

Leave a Reply

Your email address will not be published. Required fields are marked *