ಕಲಬುರಗಿ: ಬಿಸಿಯೂಟದ ಸಾಂಬರ್ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ (16-11-2023) ಗುರುವಾರ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ದುರ್ಘಟನೆ ಸಂಭವಿಸಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 20ಕ್ಕೂ ಹೆಚ್ಚು ಮಂದಿಯ ಬಂಧನ
ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಬಾಲಕಿ. ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಾಳೆ. ಮಧ್ಯಾಹ್ನ 1.30 ಕ್ಕೆ ಊಟದ ಸಮಯದಲ್ಲಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ. ಸಾಂಬಾರ್ ಪಾತ್ರೆಗೆ ಬಿದ್ದ ಪರಿಣಾಮ ಬಾಲಕಿ ಮಹಾಂತಮ್ಮ ಗಂಭೀರ ಗಾಯಗೊಂಡಿದ್ದು, ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಿಸಿಯೂಟ ಸಿಬ್ಬಂದಿ ನಿರ್ಲಕ್ಷದಿಂದಲೇ ದುರ್ಘಟನೆ ಸಂಭವಿಸಿದ್ದು, ಸಿಬ್ಬಂದಿಯ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯ ಅಡುಗೆಯವರ ವಜಾ: ಸುರಕ್ಷಿತವಾಗಿ ಬಿಸಿಯೂಟ ವಿತರಿಸದೇ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಹಾಗೂ ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ.ತಳಕೇರಿ ಅವರನ್ನು ವಜಾಗೊಳಿಸಿ ಕ್ರಮವಾಗಿ ಡಿ.ಡಿ.ಪಿ.ಐ ಮತ್ತು ತಾಲೂಕ ಪಂಚಾಯತ್ ಇ.ಓ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ವಿಡಿಯೋ ನೋಡಿ: ನ್ಯಾಯ ಕೇಳಿದ ಕಾರ್ಮಿಕರನ್ನು ಕೂಡಿ ಹಾಕಿದ ಬಾಲಾಜಿ ಗಾರ್ಮೆಂಟ್ಸ್ ವಿರುದ್ಧ ಆಕ್ರೋಶ Janashakthi Media