ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣ | ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾದ ಪ್ರಕರಣದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜಿಲ್ಲೆಯ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಬುಧವಾರ ಮುಗಿದಿದ್ದು, ಆದೇಶವನ್ನು ಜನವರಿ 17 ಕ್ಕೆ ಕಾಯ್ದಿರಿಸಿದೆ. ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಅವರು ದಾಖಲಿಸಿದ್ದ ದೂರಿನ ಅನ್ವಯ ಭಟ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅವರ ಪರವಾಗಿ ಬೆಂಗಳೂರಿನ ಖ್ಯಾತ ವಕೀಲ ಎಸ್. ಬಾಲನ್ ವಿಸ್ತೃತವಾಗಿ ವಾದ ಮಂಡಿಸಿದ್ದಾರೆ.

ನ್ಯಾಯಾಲಯದಲ್ಲಿ ಬಾಲನ್ ಅವರು, ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್ ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾರೆ ಎಂದು ವಾದಿಸಿದ್ದು, “ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾರೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾರೆ” ಎಂದು ಕಾನೂನು, ಕಾಯ್ದೆಗಳನ್ನು ಉಲ್ಲೇಖಿಸಿ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಆಹ್ವಾನ ವಿಚಾರ | ಕೊನೆಗೂ ತೀರ್ಮಾನ ಕೈಗೊಂಡ ಕಾಂಗ್ರೆಸ್ ಹೇಳಿದ್ದೇನು?

ಆರೋಪಿ ಕಲ್ಲಡ್ಕ ಭಟ್ ದೇಶ ಒಡೆಯುವ ಸಂಘಟಿತ ಕೃತ್ಯ ಮಾಡಿದ್ದಾರೆ. ಆ ಕಾರಣಕ್ಕಾಗಿ ಅವರ ವಿರುದ್ದ ಹೆಚ್ಚುವರಿಯಾಗಿ ಕೋಕಾ ಅ್ಯಕ್ಟ್ ಮತ್ತು ಯುಎಪಿಎ ಅ್ಯಕ್ಟ್, ಟೆರರಿಸ್ಟ್ ಅ್ಯಕ್ಟ್ ಗಳನ್ನು ಸೇರಿಸಬೇಕಿದೆ ಎಂದು ಬಾಲನ್ ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಈ ಎಲ್ಲಾ ಕಾರಣಕ್ಕೆ ಆರೋಪಿ ಪೊಲೀಸ್ ಕಸ್ಟಡಿಗೆ ಬೇಕಾಗಿದ್ದಾರೆ. ಆರೋಪಿ ಕಲ್ಲಡ್ಕ ಭಟ್ಟ ಹೇಳಿರುವ ಹೇಳಿಕೆಯನ್ನು ಅವರಿಂದ ದೃಢಪಡಿಸಿಕೊಂಡು, ಹೇಳಿಕೆಯ ಮಾದರಿ ಪಡೆದುಕೊಂಡು ಫಾರೆನ್ಸಿಕ್ ಲ್ಯಾಬ್ ಗೆ ಕಳಿಸಬೇಕಿದೆ. ಆರೋಪಿ ಮೇಲೆ ರೌಡಿ ಶೀಟ್‌ ತೆರೆಯಲು ಎಲ್ಲ ಆಧಾರಗಳಿದ್ದು, ಇವುಗಳ ಹಿನ್ನಲೆಯಲ್ಲಿ ಆರೋಪಿಯನ್ನು ತನಿಖೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನು ನಿರಾಕರಿಸಬೇಕು ಎಂದು ಬಾಲನ್ ನ್ಯಾಯಾಯವನ್ನು ಕೇಳಿಕೊಂಡಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರು ಮತ್ತು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ ಎಂದು ವರದಿಯಾಗಿದೆ. ವಾದವನ್ನು ಆಲಿಸಿದ ನ್ಯಾಯಾಲಯವು ಆದೇಶವನ್ನು ಜನವರಿ 17 ಕ್ಕೆ ಕಾಯ್ದಿರಿಸಿದೆ.

ವಿಡಿಯೊ ನೋಡಿ: ಹೆಂಚುಗಳು ನಿರ್ಮಾಣವಾಗುವುದು ಹೇಗೆ? ಅದರ ಹಿಂದಿರುವ ಕಾರ್ಮಿಕರ ಶ್ರಮ ಎಂತದ್ದು? ಈ ವಿಡಿಯೋ ನೋಡಿ Janashakthi Media

Donate Janashakthi Media

Leave a Reply

Your email address will not be published. Required fields are marked *